
ಬೆಂಗಳೂರು (ಜ. 08): ಕಳೆದ ವಾರ ಮೇಕೆದಾಟು ಕುರಿತಂತೆ ಸಂಸತ್ ಆವರಣದಲ್ಲಿ ರಾಜ್ಯದ ಸರ್ವ ಪಕ್ಷಗಳ ಸಂಸದರು ಪ್ರತಿಭಟನೆ ನಡೆಸಿದಾಗ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಕೂಡ ಅಲ್ಲಿ ಬಂದು ನಿಂತಿದ್ದರು.
ಸಂಸತ್ತಿನ ನಿಯಮದಂತೆ ಸಂಸದರು ಮಾತ್ರ ಆವರಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಬಹುದು. ಉಳಿದವರು ಹೊರಗೆ ಹೋಗಿ ಮಾತನಾಡಬೇಕು. ಜೊತೆಗೆ ಮಂತ್ರಿ ಆದವರು ಸ್ವತಃ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತಿಲ್ಲ. ಆದರೆ ಎಲ್ಲ ನಿಯಮ ಮುರಿದ ಡಿ.ಕೆ. ಶಿವಕುಮಾರ್ ಉತ್ಸಾಹದಿಂದ ತಾವೇ ಪ್ರತಿಭಟನೆಗೆ ಬಂದು ಮೀಡಿಯಾ ಜೊತೆಗೂ ಮಾತನಾಡುತ್ತಿದ್ದರು. ಇದರಿಂದ ಕೆಲ ಕಾಲ ಇರಿಸುಮುರುಸಿನ ಸ್ಥಿತಿ ನಿರ್ಮಾಣವಾಗಿತ್ತು.
-ಪ್ರಶಾಂತ್ ನಾತು, ಸುವರ್ಣ ನ್ಯೂಸ್ ದೆಹಲಿ ಪ್ರತಿನಿಧಿ
ರಾಜಕಾರಣದ ಸುದ್ದಿಗಾಗಿ ಇಂಡಿಯಾ ಗೇಟ್ ಕ್ಲಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.