ಸುಮಲತಾ ಬಳಿ ಮೊದಲೇ ಮಾತನಾಡಿದ್ದೆವು : ಡಿಕೆಶಿ ತಿಳಿಸಿದ ಸೀಕ್ರೆಟ್

Published : May 07, 2019, 02:18 PM ISTUpdated : May 07, 2019, 02:38 PM IST
ಸುಮಲತಾ ಬಳಿ ಮೊದಲೇ ಮಾತನಾಡಿದ್ದೆವು : ಡಿಕೆಶಿ ತಿಳಿಸಿದ ಸೀಕ್ರೆಟ್

ಸಾರಾಂಶ

ಮಂಡ್ಯ ಚುನಾವಣೆ ವಿಚಾರವಾಗಿ ಇದೀಗ ಡಿ.ಕೆ.ಶಿವಕುಮಾರ್ ವಿಚಾರವೊಂದನ್ನು ತಿಳಿಸಿದ್ದಾರೆ. ಟಿಕೆಟ್ ವಿಚಾರದ ಬಗ್ಗೆ ಸುಮಲತಾ ಬಳಿ ಮೊದಲೇ ಮಾತನಾಡಿದ್ದಾಗಿ ತಿಳಿಸಿದ್ದಾರೆ. 

ಹುಬ್ಬಳ್ಳಿ : ಕುಂದಗೋಳ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಟ್ರಬಲ್ ಶೂಟರ್ ಎಂದೇ ಹೆಸರಾದ ಡಿ.ಕೆ ಶಿವಕುಮಾರ್ ಈ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡಿದ್ದು, ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. 

ಕುಂದಗೋಳ ಚುನಾವಣಾ ತಯಾರಿಯಲ್ಲಿ ತೊಡಗಿರುವ ಶಿವಕುಮಾರ್ ಇದೇ ವೇಳೆ ಮಂಡ್ಯ ಲೋಕಸಭಾ ಚುನಾವಣೆ ವಿಚಾರವಾಗಿ ಮಾತನಾಡಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಯಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕೆ ಇಳಿಸುವ ಬಗ್ಗೆ ಮೊದಲೇ ಸುಮಲತಾಗೆ ತಿಳಿಸಲಾಗಿದ್ದು ಎಂದರಿ. 

ಸಹೋದರಿ ಸುಮಲತಾಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಬೇರೆ ಕ್ಷೇತ್ರದಲ್ಲಿ ಅವಕಾಶ ಕೊಡುವುದಾಗಿ ತಿಳಿಸಲಾಗಿತ್ತು. ಆದರೆ ಅವರು ಪಕ್ಷೇತರವಾಗಿ ಸ್ಪರ್ಧೆ ಮಾಡಿ ಬೇರೆ ಪಕ್ಷದ ಸಪೋರ್ಟ್ ತೆಗೆದುಕೊಂಡರು ಎಂದರು.

ಇನ್ನು ರಾಜ್ಯ ರಾಜಕೀಯದ ಬಗ್ಗೆಯೂ ಮಾತನಾಡಿದ ಅವರು ರಾಜಕೀಯದಲ್ಲಿ ಚದುರಂಗದ ಆಟ ಸೂಕ್ಷ್ಮವಾಗಿರುತ್ತದೆ. ಬಿಜೆಪಿಯಿಂದ ಬರುವವರನ್ನು ನಾವು ಸ್ವಾಗತಿಸುತ್ತೇವೆ. 

ಚುನಾವಣೆಯ ಬಳಿಕ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ಮತ್ತಷ್ಟು ಬಲಿಷ್ಠವಾಗುತ್ತದೆ. ಕ್ಷೇತ್ರಕ್ಕೊಬ್ಬ ಸಚಿವರು ಮತ್ತು ಶಾಸಕರ ನೇಮಕ ವಿಚಾರದ ಬಗ್ಗೆಯೂ ಪ್ರತಿಕ್ರಿಯಿಸಿ ಬಿಜೆಪಿಯೂ ಇದೇ ಕೆಲಸ ಮಾಡುತ್ತಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: Aadi Lakshmi Purana Serial - ವಿರುದ್ಧ ದಿಕ್ಕಿನಲ್ಲಿ ಸಾಗುವ, ಒಬ್ಬರನ್ನೊಬ್ಬರು ಕಂಡರೆ ಆಗದವ್ರು ಮದುವೆಯಾಗುವ ಕಥೆ