ಮಹಾರಾಷ್ಟ್ರ ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ಗರಂ

By Web DeskFirst Published May 19, 2019, 1:26 PM IST
Highlights

ಮಹಾರಾಷ್ಟ್ರ ಸರ್ಕಾರ ವಿರುದ್ಧ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಕಾರಣವೇನು..?

ಬೆಳಗಾವಿ : ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೃಷ್ಣಾ ನದಿ ತೀರದ ಜನತೆಗೆ ತಕ್ಷಣವೇ  ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಿ ದ್ದರೂ ಮಹಾರಾಷ್ಟ್ರ ಸರ್ಕಾರ ಈವರೆಗೂ ನೀರು ಬಿಡುಗಡೆ ಮಾಡಿಲ್ಲ. 

ಕೃಷ್ಣಾ ನದಿ ತೀರದ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳ ಜನತೆ ತೀವ್ರ ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದರೆ, ಮಹಾರಾಷ್ಟ್ರ ಸರ್ಕಾರ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುತ್ತಿಲ್ಲ. ನೀರಿಗಾಗಿ ನೀರು ಕೊಡುವಂತೆ ಒಪ್ಪಂದ ಮಾಡಿಕೊಳ್ಳಲು ಸರ್ಕಾರ ಸಿದ್ಧವಿದ್ದರೂ ಮಹಾರಾಷ್ಟ್ರ ನೀರು ಬಿಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿ ದರು.

ಕೃಷ್ಣೆ ಬತ್ತಿದ್ದರಿಂದ ನದಿ ತೀರದ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಭಾಗದ ಜನತೆಗೆ ಅನುಕೂಲವಾಗುವಂತೆ ಘಟಪ್ರಭಾ (ಹಿಡಕಲ್) ಜಲಾಶಯದಿಂದ ತಕ್ಷಣವೇ ಒಂದು ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ನೀರಾವರಿ ಇಲಾಖೆ ಅಧಿಕಾರಿ ಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. 

ಕೊಯ್ನಾ ಜಲಾ ಶಯದಿಂದ ನೀರು ಬಿಡುವಂತೆ ಕೋರಿ ರಾಜ್ಯದ ಜನಪ್ರತಿನಿಧಿಗಳ ನಿಯೋಗ ಕೆಲದಿನಗಳ ಹಿಂದೆ ಮಹಾರಾಷ್ಟ್ರಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಆ ನಂತರ ಮಹಾರಾಷ್ಟ್ರ ಸರ್ಕಾರ ನೀರಿನ ಬದಲು ನೀರು ಒಪ್ಪಂದ ಮಾಡಿಕೊಂಡು ಕೃಷ್ಣೆಗೆ ನೀರು ಬಿಡುವ ಪ್ರಸ್ತಾಪ ಇಟ್ಟಿತ್ತು. ಈ ಹಿಂದೆ ಹಣ ಪಡೆದು ನೀರು ಬಿಡುತ್ತಿದ್ದ ಮಹಾರಾಷ್ಟ್ರದ ಈ ಹೊಸ ಪ್ರಸ್ತಾಪಕ್ಕೆ ರಾಜ್ಯಸರ್ಕಾರವೂ ಒಪ್ಪಿಗೆ ಸೂಚಿಸಿತ್ತು.

click me!