
ಬೆಂಗಳೂರು: ಐಟಿ ದಾಳಿ ಪ್ರಕರಣದಲ್ಲಿ ನನ್ನ ಬಗ್ಗೆ ಕೇಳಿಬರುತ್ತಿರುವ ಆರೋಪಗಳ ಬಗ್ಗೆ ಸೂಕ್ತ ಸಮಯದಲ್ಲಿ ಉತ್ತರ ನೀಡುತ್ತೇನೆ. ಶುಭ ಗಳಿಗೆ, ಶುಭ ಮುಹೂರ್ತಕ್ಕಾಗಿ ಕಾಯುತ್ತಿದ್ದೇನೆ. ಯಾರು ಯಾವ ಉದ್ಯಮಿ ಬಳಿ ಯಾವ ವ್ಯವಹಾರ ಮಾಡುತ್ತಿದ್ದಾರೆ ಎಂಬುದನ್ನೆಲ್ಲಾ ಬಯಲು ಮಾಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ್ಪು ತಿಂದವರು ನೀರು ಕುಡಿಯಬೇಕು ಎಂಬ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆಗೆ ತಿರುಗೇಟು ನೀಡಿದರು. ಎಲ್ಲದಕ್ಕೂ ಶುಭ ಗಳಿಗೆ, ಶುಭ ಮುಹೂರ್ತದಲ್ಲಿ ಉತ್ತರ ಕೊಡುತ್ತೇನೆ. ಯಾರು ಎಲ್ಲಿ, ಯಾವ ಉದ್ಯಮಿ ಬಳಿ ವ್ಯವಹಾರ ಮಾಡುತ್ತಿದ್ದಾರೆ, ಯಾರ್ಯಾರು ಯಾವ ಹೋಟೆಲ್‌ಗಳ ಮಾಲೀಕರು ಎಂಬುದೆಲ್ಲಾ ನನಗೆ ಗೊತ್ತಿದೆ. ಮುಹೂರ್ತ ಕೂಡಿ ಬಂದ ತಕ್ಷಣ ಎಲ್ಲವನ್ನೂ ಹೇಳುತ್ತೇನೆ ಎಂದು ಹೇಳಿದರು.
ಪ್ರಸ್ತುತ ಪ್ರಕರಣ ತನಿಖಾ ಹಂತದಲ್ಲಿದೆ. ನನ್ನ ಮೇಲೆ ಆರೋಪ ಮಾಡಿರುವ ಶೋಭಾ ಕರಂದ್ಲಾಜೆ ಅವರಿಗೆ ಒಳ್ಳೆಯದಾಗಲಿ. ಆಲ್ ದಿ ಬೆಸ್ಟ್ ಎಂದಷ್ಟೇ ಹೇಳುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.