ಸಿಎಂ ಬಗ್ಗೆ ತಾಯಿ ಹೇಳಿಕೆಗೆ ಬಹಿರಂಗ ಕ್ಷಮೆ ಯಾಚಿಸಿದ ಡಿಕೆಶಿ

Published : Aug 05, 2017, 05:55 PM ISTUpdated : Apr 11, 2018, 01:04 PM IST
ಸಿಎಂ ಬಗ್ಗೆ ತಾಯಿ ಹೇಳಿಕೆಗೆ ಬಹಿರಂಗ ಕ್ಷಮೆ ಯಾಚಿಸಿದ ಡಿಕೆಶಿ

ಸಾರಾಂಶ

ಆದಾಯ ತೆರಿಗೆ ಇಲಾಖೆ ದಾಳಿ ಸಂದರ್ಭದಲ್ಲಿ ತನ್ನ ತಾಯಿ ಮುಖ್ಯಮಂತ್ರಿಗಳ ಬಗ್ಗೆ ಆಡಿದ ಮಾತುಗಳಿಗೆ ಇಂಧನ ಸಚಿವ  ಡಿ.ಕೆ, ಶಿವಕುಮಾರ್  ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಪುತ್ರಸಹಜ ವಾತ್ಸಲ್ಯದಿಂದಾಗಿ ಮಾನ್ಯ ಮುಖ್ಯಮಂತ್ರಿಗಳ ಬಗ್ಗೆ ಆಡಿದ ಮಾತುಗಳ ಬಗ್ಗೆ ನಾನು ಬಹಿರಂಗವಾಗಿ ಕ್ಷಮೆ ಯಾಚಿಸುತ್ತೇನೆ ಎಂದು ಡಿಕೆಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿ ಸಂದರ್ಭದಲ್ಲಿ ತನ್ನ ತಾಯಿ ಮುಖ್ಯಮಂತ್ರಿಗಳ ಬಗ್ಗೆ ಆಡಿದ ಮಾತುಗಳಿಗೆ ಇಂಧನ ಸಚಿವ  ಡಿ.ಕೆ, ಶಿವಕುಮಾರ್  ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.

ಪುತ್ರಸಹಜ ವಾತ್ಸಲ್ಯದಿಂದಾಗಿ ಮಾನ್ಯ ಮುಖ್ಯಮಂತ್ರಿಗಳ ಬಗ್ಗೆ ಆಡಿದ ಮಾತುಗಳ ಬಗ್ಗೆ ನಾನು ಬಹಿರಂಗವಾಗಿ ಕ್ಷಮೆ ಯಾಚಿಸುತ್ತೇನೆ ಎಂದು ಡಿಕೆಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒತ್ತಡಕ್ಕೊಳಗಾಗಿದ್ದ ಸಂದರ್ಭದಲ್ಲಿ ತಾಯಿಯ ಮುಗ್ಧತೆಯನ್ನು ದುರುಪಯೋಗಪಡಿಸಿಕೊಂಡು ಮಾಧ್ಯಮಗಳು, ಮುಖ್ಯಮಂತ್ರಿ ಬಗ್ಗೆ ಹೇಳಿಕೆ ನೀಡುವಂತೆ ಪ್ರಚೋದಿಸಿದೆ, ಎಂದು ಅವರು ಹೇಳಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳು ಎಂದಿಂದಿಗೂ ನನಗೆ ಬೆಂಬಲವಾಗಿ ನಿಂತಿದ್ದಾರೆ. ನಾನು ನನ್ನ ತಾಯಿಯ ಉದ್ದೇಶಪೂರ್ವಕವಲ್ಲದ  ಹೇಳಿಕೆಗೆ ಮಾನ್ಯ ಮುಖ್ಯಮಂತ್ರಿಗಳು ಮತ್ತು ರಾಜ್ಯದ ಕ್ಷಮೆ ಕೋರುತ್ತೇನೆ ಎಂದು ಅವರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಜಯಪುರ: ಕಬ್ಬು ತುಂಬಿದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ, ಸ್ಥಳದಲ್ಲೇ ಸವಾರ ದುರ್ಮರಣ
ಬೆಡ್‌ಶೀಟ್ ಒಂದೇ ಸಾಕು ನಿಮ್ಮ ಮನೆ ಲಕ್ಸುರಿ ವಿಲ್ಲಾ ಆಗಲು: ಸ್ಪ್ರಿಂಗ್ ಸೀಸನ್‌ಗಾಗಿ ಇಲ್ಲಿವೆ 5 ಸೂಪರ್ ಡಿಸೈನ್ಸ್!