
ಬೆಂಗಳೂರು[ಜು.15]: ರಾಜೀನಾಮೆ ನೀಡಿರುವ ಅತೃಪ್ತ ಶಾಸಕರ ಮನವೊಲಿಕೆ ಪ್ರಯತ್ನ ವಿಫಲವಾಗುತ್ತಲಿರುವ ಹಿನ್ನೆಲೆಯಲ್ಲಿ ಆತಂಕಗೊಂಡಿರುವ ಪಕ್ಷದ ಎಲ್ಲ ಇತರೆ ಶಾಸಕರೊಂದಿಗೆ ಸಭೆ ನಡೆಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಧ್ಯಕ್ಷ ಸಿದ್ದರಾಮಯ್ಯ, ಆತಂಕ ಪಡಬೇಡಿ ಸರ್ಕಾರ ಉಳಿಸಿಕೊಳ್ಳುವ ಎಲ್ಲ ಪ್ರಯತ್ನ ಮಾಡುತ್ತಿದ್ದೇವೆ ಎಂದು ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿದ್ದಾರೆ.
ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಭಾನುವಾರ ನಗರದ ತಾಜ್ ವಿವಾಂತ ಹೋಟೆಲ್‌ನಲ್ಲಿ ಪಕ್ಷದ ಎಲ್ಲ ಇತರೆ ಶಾಸಕರನ್ನು ಕರೆದು ಮಾತನಾಡಿರುವ ಸಿದ್ದರಾಮಯ್ಯ, ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿ ಯಾರಿಗಾದರೂ ಏನೇ ಆತಂಕ, ಅನುಮಾನಗಳಿದ್ದರೂ ಹೇಳಿ. ಸರ್ಕಾರಕ್ಕೆ ಏನೂ ಆಗುವುದಿಲ್ಲ. ಮುಖ್ಯಮಂತ್ರಿ ಅವರು ವಿಶ್ವಾಸಮತ ಯಾಚನೆ ವೇಳೆ ಎಲ್ಲರೂ ಸದನಕ್ಕೆ ಹಾಜರಾಗಿ ಪಕ್ಷದ ಪರ ಮತ ಚಲಾಯಿಸಿ. ಶಾಸಕರು ಕೈತಪ್ಪಿ ಹೋಗುತ್ತಿರುವ ಬಗ್ಗೆ ಆತಂಕಪಡಬೇಡಿ. ಅವರನ್ನು ಮನವೊಲಿಸಿ ಕರೆತರುವ ಕೆಲಸ ಮಾಡಲಾಗುತ್ತಿದೆ. ನಾವು ಸರ್ಕಾರ ಉಳಿಸಿಕೊಳ್ಳಲು ಏನು ಮಾಡಬೇಕೋ ಮಾಡುತ್ತಿದ್ದೇವೆ ಎಂದು ಶಾಸಕರಲ್ಲಿ ಆತ್ಮವಿಶ್ವಾಸ ಮೂಡಿಸುವ ಪ್ರಯತ್ನ ನಡೆಸಿದರು ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.