
ನವದೆಹಲಿ: ಭಾರತೀಯ ವೈದ್ಯಕೀಯ ಪರಿಷತ್ತು (ಎಂಸಿಐ) ರದ್ದು ಮಾಡಿ ಅದರ ಬದಲು ರಾಷ್ಟ್ರೀಯ ವೈದ್ಯ ಆಯೋಗ (ಎನ್ಎಂಸಿ) ರಚಿಸುವ ಉದ್ದೇಶ ಹೊಂದಿರುವ ಕೇಂದ್ರ ಸರ್ಕಾರದ ‘ರಾಷ್ಟ್ರೀಯ ವೈದ್ಯ ಆಯೋಗ ಮಸೂದೆ- 2017 ’ನ್ನು ವಿರೋಧಿಸಿ ಇಂದು ದೇಶಾದ್ಯಂತ ಹೊರ ರೋಗಿಗಳ ವಿಭಾಗವನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ಇಂದು ವೈದ್ಯರು ನಿರ್ಧರಿಸಿದ್ದಾರೆ.
ಭಾರತೀಯ ವೈದ್ಯಕೀಯ ಸಂಘ (ಐಎಂಎ) ಈ ಬಂದ್‌ಗೆ ಕರೆ ನೀಡಿದೆ. ಎಂಸಿ ಎದಲ್ಲಿ 2.77 ಲಕ್ಷ ವೈದ್ಯ ಸದಸ್ಯರಿದ್ದಾರೆ. ಮುಷ್ಕರಕ್ಕೆ ಐಎಂಎ ಕರೆ ನೀಡಿದ್ದು, ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ ವಿಭಾಗ (ಒಪಿಡಿ) ಬಂದ್ ಆಗಲಿವೆ. ಆದರೆ ತುರ್ತು ವಿಭಾಗಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಕಳೆದ ಶುಕ್ರವಾರವೇ ಮಸೂದೆ ಲೋಕಸಭೆಯಲ್ಲಿ ಮಂಡನೆಯಾಗಿದ್ದು, ವಿಧೇಯಕದ ಅನುಸಾರ ಭ್ರಷ್ಟಾಚಾರದ ಆರೋಪ ಹೊತ್ತಿರುವ ಭಾರತೀಯ ವೈದ್ಯಕೀಯ ಪರಿಷತ್ತು (ಎಂಸಿಐ) ರದ್ದಾಗಲಿದ್ದು, ಆ ಜಾಗಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಅಸ್ತಿತ್ವಕ್ಕೆ ಬರಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.