
ಬೆಂಗಳೂರು (ಸೆ.27): ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕ ಗಾಂಧಿ ಮುಂಬರುವ ವಿಧಾನಸಭೆ ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ಬರ್ತಾರೆ ಅನ್ನೋ ಮಾತು ಕೇಳಿ ಬಂದಿತ್ತು. ಮುಂಬರುವ ಚುನಾವಣೆ ಪ್ರಚಾರಕ್ಕೆ ಪ್ರಿಯಾಂಕ ಗಾಂಧಿಯನ್ನು ರಾಜ್ಯಕ್ಕೆ ಕರೆಸಬೇಕು ಅನ್ನೋ ಚಿಂತನೆ ಸಿಎಂ ಸಿದ್ದರಾಮಯ್ಯನವರದ್ದಾಗಿದೆ. ಈ ಮೂಲಕ ಗೆಲುವಿನ ಕ್ರೆಡಿಟ್’ನ್ನು ಹೈಕಮಾಂಡ್ಗೆ ನೀಡಲು ರಾಜ್ಯ ನಾಯಕರು ರೆಡಿಯಾಗಿದ್ದಾರೆ. ಆದರೆ ಪ್ರಿಯಾಂಕ ಗಾಂಧಿ ರಾಜ್ಯಕ್ಕೆ ಬರೋ ವಿಚಾರವನ್ನ ಕಾಂಗ್ರೆಸ್ ಉನ್ನತ ಮೂಲಗಳು ಅಲ್ಲಗಳೆದಿದ್ದು, 2019ರ ಲೋಕಸಭೆ ಚುನಾವಣೆಗೆ ಪ್ರಿಯಾಂಕ ಗಾಂಧಿಯನ್ನು ಪರಿಚಯಿಸಲು ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ.
ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ರಾಷ್ಟ್ರೀಯ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಮಾಡಿ ಕಾಂಗ್ರೆಸ್ಗೆ ಮತ್ತೇ ರಾಷ್ಟ್ರಮಟ್ಟದಲ್ಲಿ ಪುನಶ್ಚೇತನಗೊಳಿಸುವ ಉದ್ದೇಶ ಸೋನಿಯಾ ಮತ್ತು ರಾಹುಲ್ ಗಾಂಧಿಯದ್ದಾಗಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.