
ನವದೆಹಲಿ (ನ.10): ಭಾರತ ಅಭಿವೃದ್ಧಿ ಪಥದತ್ತ ಸಾಗುತ್ತಿರೋದನ್ನ ವಿಶ್ವದ ದೊಡ್ಡಣ್ಣ ಅಮೆರಿಕಾ ಹಾಡಿ ಕೊಂಡಾಡಿದೆ. ಇದಕ್ಕೆ ಕಾರಣರಾದ ಪ್ರಧಾನಿ ಮೋದಿಯರಿಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಷ್ ಎಂದಿದ್ದಾರೆ.
ವಿಯೆಟ್ನಾಂನಲ್ಲಿ ನಡೆದ ಏಷ್ಯಾ-ಪೆಸಿಫಿಕ್ ಆರ್ಥಿಕ ಸಹಕಾರ ಶೃಂಗ ಸಭೆಯಲ್ಲಿ ಡೊನಾಲ್ಡ್ ಟ್ರಂಪ್ ಭಾರತದ ಪ್ರಧಾನಿಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಾಡಿಹೊಗಳಿದ್ದಾರೆ . ಆರ್ಥಿಕ ವಲಯದಲ್ಲಿ ಭಾರತದ ಪ್ರಗತಿಯನ್ನು ಶ್ಲಾಘಿಸಿದ ಟ್ರಂಪ್, ಭಾರತ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಬಣ್ಣಿಸಿದ್ರು.ಸ್ವಾತಂತ್ರ್ಯದ 70ನೇ ವರ್ಷವನ್ನು ಭಾರತ ಆಚರಿಸುತ್ತಿದೆ. 100 ಕೋಟಿಗಿಂತಲೂ ಹೆಚ್ಚು ಜನರಿರುವ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ ಭಾರತ. ಆರ್ಥಿಕ ವಲಯದಲ್ಲಿ ಅಚ್ಚರಿ ಹುಟ್ಟಿಸುವಂತ ಅಭಿವೃದ್ಧಿ ಸಾಧಿಸಲು ಭಾರತದಿಂದ ಸಾಧ್ಯವಾಗಿದೆ ಎಂದು ಮೋದಿ ಯಶ್ವಸಿ ಹಾದಿಯನ್ನು ಟ್ರಂಪ್ ಕೊಂಡಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.