ಈ ಬಾರಿಯೂ ‘ವರ್ಷದ ವ್ಯಕ್ತಿ-2016’ ಗೌರವದಿಂದ ವಂಚಿತರಾದ ಮೋದಿ

By Suvarna Web DeskFirst Published Dec 7, 2016, 2:35 PM IST
Highlights

ಒಳ್ಳೆಯ ಅಥವಾ ಕೆಟ್ಟ ವಿಷಯಕ್ಕಾಗಿ ಕಳೆದ ವರ್ಷದಲ್ಲಿ ನಮ್ಮ ಜಗತ್ತಿನ ಮೇಲೆ ಪ್ರಭಾವ ಬೀರಿರುವ ವ್ಯಕ್ತಿಗಳನ್ನು ‘ವರ್ಷದ ವ್ಯಕ್ತಿ’ ಎಂದು ಓದುಗರ ಮತದಾನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಕಳೆದ ವರ್ಷ ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್ ‘ವರ್ಷದ ವ್ಯಕ್ತಿ’ಯಾಗಿ ಆಯ್ಕೆಯಾಗಿದ್ದರು.

ನವದೆಹಲಿ (ಡಿ.07): ಪ್ರತಿಷ್ಠಿತ ಟೈಮ್ಸ್ ಮ್ಯಾಗಜಿನ್‌ನ ‘ವರ್ಷದ ವ್ಯಕ್ತಿ-2016’ಯಾಗಿ ಅಮೆರಿಕಾದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಯ್ಕೆಯಾಗಿದ್ದಾರೆ.

ತನ್ನ ರಾಜಕೀಯ ಪ್ರತಿಸ್ಪರ್ಧಿ ಹಿಲರಿ ಕ್ಲಿಂಟನ್, ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುತಿನ್, ಮುಂತಾದವರನ್ನು ಹಿಂದಿಕ್ಕುವ ಮೂಲಕ ಡೊನಾಲ್ಡ್ ಟ್ರಂಪ್ ಟೈಮ್ಸ್ ಮ್ಯಾಗಜಿನ್‌ನ  ‘ವರ್ಷದ ವ್ಯಕ್ತಿ-2016’ ಗೌರವವನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಿಲರಿ ಕ್ಲಿಂಟನ್ ಅಯ್ಕೆ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಟೈಮ್ಸ್ ಮ್ಯಾಗಜಿನ್‌ನ  ‘ವರ್ಷದ ವ್ಯಕ್ತಿ-2016’ಯಾಗಿ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ, ಹಾಗೂ ನನ್ನ ಪಾಲಿಗೆ ಮಹತ್ವಪೂರ್ಣವಾಗಿದೆ ಎಂದು ಟ್ರಂಪ್ ಈ ಸಂದರ್ಭದಲ್ಲಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಈ ಬಾರಿಯೂ ‘ವರ್ಷದ ವ್ಯಕ್ತಿ-2016’ ಗೌರವ ಪಡೆಯುವಲ್ಲಿ ವಿಫಲರಾಗಿದ್ದಾರೆ. ಗೌರವದ ಆಯ್ಕೆಗೆ ನಡೆಯುವ ಮತದಾನದಲ್ಲಿ ಪ್ರಧಾನಿ ಮೋದಿಯವರು ಕಳೆದ ನಾಲ್ಕು ವರ್ಷಗಳಿಂದ ಸ್ಪರ್ಧೆಯಲ್ಲಿದ್ದಾರೆ.

ಒಳ್ಳೆಯ ಅಥವಾ ಕೆಟ್ಟ ವಿಷಯಕ್ಕಾಗಿ ಕಳೆದ ವರ್ಷದಲ್ಲಿ ನಮ್ಮ ಜಗತ್ತಿನ ಮೇಲೆ ಪ್ರಭಾವ ಬೀರಿರುವ ವ್ಯಕ್ತಿಗಳನ್ನು ‘ವರ್ಷದ ವ್ಯಕ್ತಿ’ ಎಂದು ಓದುಗರ ಮತದಾನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಕಳೆದ ವರ್ಷ ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್ ‘ವರ್ಷದ ವ್ಯಕ್ತಿ’ಯಾಗಿ ಆಯ್ಕೆಯಾಗಿದ್ದರು.

ಓದುಗರ ಆನ್‌ಲೈನ್ ಮತದಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌, ಸೇರಿದಂತೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಹಿಲರಿ ಕ್ಲಿಂಟನ್, ಎಫ್'ಬಿಐ ಮುಖ್ಯಸ್ಥ ಜೇಮ್ಸ್ ಕಾಮಿ, ಅ್ಯಪಲ್ ಸಿಇಓ ಟಿಮ್ ಕುಕ್ ಮುಂತಾದವರನ್ನು ಕೂಡಾ ಪ್ರಧಾನಿ ಮೋದಿ ಹಿಂದಿಕ್ಕಿದ್ದರು.

ಓದುಗರ ಮತದಾನದ ಫಲಿತಾಂಶವನ್ನು ಮುಂದಿಟ್ಟುಕೊಂಡು ಸಂಪಾದಕರ ಮಂಡಳಿಯು ಅಂತಿಮ ಆಯ್ಕೆಯನ್ನು ಮಾಡುತ್ತದೆ.

click me!