ಟ್ರಂಪ್ ಮೋದಿ ಫೋನ್ ಇನ್ ಮಾತುಕತೆ

Published : Jan 25, 2017, 12:19 PM ISTUpdated : Apr 11, 2018, 12:59 PM IST
ಟ್ರಂಪ್ ಮೋದಿ ಫೋನ್ ಇನ್ ಮಾತುಕತೆ

ಸಾರಾಂಶ

ಉಭಯ ನಾಯಕರು ಭಯೋತ್ಪಾದನೆ, ವ್ಯಾಪಾರ ಮತ್ತು ರಕ್ಷಣೆ ಕುರಿತಂತೆ ಚರ್ಚಿಸಿದ್ದು, ದ್ವಿರಾಷ್ಟ್ರಗಳ ಸ್ನೇಹ, ವಾಣಿಜ್ಯ ವ್ಯವಹಾರ ಮತ್ತಿತ್ತರ ಸಂಬಂಧ ಮತ್ತಷ್ಟು ಉತ್ತಮಗೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾತನಾಡಿದ್ದಾರೆ.

ನವದೆಹಲಿ(ಜ.25): ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.

ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ 4 ದಿನದ ನಂತರ ಅಂದರೆ ಮಂಗಳವಾರ ರಾತ್ರಿ ಸುಮಾರು 11.30ರ ಸುಮಾರಿನಲ್ಲಿ ಮೋದಿಯವರಿಗೆ ಟ್ರಂಪ್ ಕರೆ ಮಾಡಿದ್ದರು. ಭಾರತವು  ತಮ್ಮ ದೇಶದ ನಿಜವಾದ ಸ್ನೇಹಿತ ರಾಷ್ಟ್ರ ಎಂದು ಬಣ್ಣಿಸಿದ ಅವರು ಇದೇ ಸಂದರ್ಭದಲ್ಲಿ ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದ್ದು, ನಾವು ನಿಮ್ಮನ್ನು ಬರ ಮಾಡಿಕೊಳ್ಳಲು ಉತ್ಸುಕರಾಗಿರುವುದಾಗಿ ಟ್ರಂಪ್ ಹೇಳಿದ್ದಾರೆ.

ಉಭಯ ನಾಯಕರು ಭಯೋತ್ಪಾದನೆ, ವ್ಯಾಪಾರ ಮತ್ತು ರಕ್ಷಣೆ ಕುರಿತಂತೆ ಚರ್ಚಿಸಿದ್ದು, ದ್ವಿರಾಷ್ಟ್ರಗಳ ಸ್ನೇಹ, ವಾಣಿಜ್ಯ ವ್ಯವಹಾರ ಮತ್ತಿತ್ತರ ಸಂಬಂಧ ಮತ್ತಷ್ಟು ಉತ್ತಮಗೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾತನಾಡಿದ್ದಾರೆ. ಇದರ ಜೊತೆ ಚೀನಾದ ಪ್ರಾಬಲ್ಯವಿರುವ ದಕ್ಷಿಣ ಮತ್ತು ಮಧ್ಯ ಏಷ್ಯಾದ ರಕ್ಷಣೆಯ ಕುರಿತು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಚರ್ಚಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
ಜಾಗತಿಕ ಶಾಂತಿ-ಸೌಹಾರ್ದತೆಗೆ ಧ್ಯಾನವೇ ಮಾರ್ಗ: ವಿಶ್ವಸಂಸ್ಥೆಯಲ್ಲಿ ರವಿಶಂಕರ್ ಗುರೂಜಿ ಸಂದೇಶ