ಬಿನ್ ಲಾಡೆನ್ ಮಗ ಹಮ್ಜಾ ಲಾಡೆನ್ ಮಟಾಷ್: ಟ್ರಂಪ್ ಘೋಷಣೆ!

Published : Sep 14, 2019, 08:40 PM ISTUpdated : Sep 14, 2019, 09:26 PM IST
ಬಿನ್ ಲಾಡೆನ್ ಮಗ ಹಮ್ಜಾ ಲಾಡೆನ್ ಮಟಾಷ್: ಟ್ರಂಪ್ ಘೋಷಣೆ!

ಸಾರಾಂಶ

ಹತ ಉಗ್ರ ಬಿನ್ ಲಾಡೆನ್ ಮಗ ಹಮ್ಜಾ ಲಾಡೆನ್ ಮಟಾಷ್| ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅಧಿಕೃತ ಘೋಷಣೆ| 10 ಲಕ್ಷ ಯುಸ್ ಡಾಲರ್(7 ಕೋಟಿ ರೂ.) ಇನಾಮು ಹೊಂದಿದ್ದ ಹಮ್ಜಾ ಲಾಡೆನ್| ಅಮೆರಿಕನ್ ಸೇನಾ ಕಾರ್ಯಾಚರಣೆಯಲ್ಲಿ ಹಮ್ಜಾ ಲಾಡೆನ್ ಸಾವು| ಬಿನ್ ಲಾಡೆನ್ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿದ್ದ ಹಮ್ಜಾ|

ವಾಷಿಂಗ್ಟನ್(ಸೆ.14): ಮಹತ್ವದ ಬೆಳವಣಿಗೆಯೊಂದರಲ್ಲಿ ಅಲ್ ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥ, ಹತ ಬಿನ್ ಲಾಡೆನ್ ಪುತ್ರ ಹಮ್ಜಾ ಬಿನ್ ಲಾಡೆನ್ ಹತನಾಗಿದ್ದಾನೆ ಎಂದು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. 

ಬರೋಬ್ಬರಿ10 ಲಕ್ಷ ಯುಸ್ ಡಾಲರ್(7 ಕೋಟಿ ರೂ.) ಇನಾಮು ಹೊಂದಿದ್ದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಹಮ್ಜಾ ಬಿನ್ ಲಾಡೆನ್’ನನ್ನು ಹೊಡೆದುರುಳಿಸಲಾಗಿದೆ ಎಂದು ಟ್ರಂಪ್ ಸ್ಪಷ್ಟನೆ ನೀಡಿದ್ದಾರೆ.

ಆಗಸ್ಟ್ ಮೊದಲ ವಾರದಲ್ಲೇ ಹಮ್ಜಾ ಬಿನ್ ನನ್ನು ಹತ್ಯೆ ಮಾಡಲಾಗಿದೆ ಎಂದ ಯುಎಸ್ ಗುಪ್ತಚರ ಸಂಸ್ಥೆಗಳು ವರದಿ ಮಾಡಿದ್ದವು. ಇದೀಗ ಟ್ರಂಪ್ ಅಧಿಕೃತ ಘೋಷಣೆ ಮಾಡುವ ಮೂಲಕ ಈ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.  

ಹಮ್ಜಾ ಬಿನ್ ತನ್ನ ತಂದೆ ಒಸಾಮಾ ಬಿನ್ ಲಾಡೆನ್ ಹಾಗೂ ಸಹೋದರ ಖಾಲಿದ್ ಬಿನ್ ಲಾಡೆನ್ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಘೋಷಿಸಿದ್ದ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸದಾಗಿ 545 ಪಿಎಸ್‌ಐ ಶೀಘ್ರ ಸೇವೆಗೆ ನಿಯೋಜನೆ: ಗೃಹ ಸಚಿವ ಪರಮೇಶ್ವರ್‌
India Latest News Live: ಅಮೆರಿಕ ತೆರಿಗೆ ದಾಳಿಗೆ ಒಳಗಾದ ದೇಶಗಳಿಂದ ಮಾದರಿಯಾದ ಚೀನಾ; ಟ್ರಂಪ್‌ಗೆ ಶಾಕ್ ನೀಡಿ ದಾಖಲೆ ಬರೆದ ಡ್ರ್ಯಾಗನ್