
ವಾಷಿಂಗ್ಟನ್(ಆ.21): ಕಾಶ್ಮೀರ ವಿವಾದ ಪರಿಹಾರಕ್ಕೆ ತಾನು ಮಧ್ಯಸ್ಥಿಕೆಗೆ ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮತ್ತೊಮ್ಮೆ ತಿಳಿಸಿದ್ದಾರೆ.
ಕಾಶ್ಮೀರ ಒಂದು ಸಂಕೀರ್ಣವಾದ ಸ್ಥಳ ಎಂದು ಅಭಿಪ್ರಾಯಪಟ್ಟಿರುವ ಟ್ರಂಪ್, ಭಾರತ ಮತ್ತು ಪಾಕಿಸ್ತಾನದ ನಡುವಿನ ಸಮಸ್ಯೆಗೆ ಧರ್ಮವೇ ಪ್ರಮುಖ ಕಾರಣ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಕಾಶ್ಮೀರ ವಿವಾದಕ್ಕೂ ಹಿಂದೂ-ಮುಸ್ಲಿಂ ವೈಮನಸ್ಸಿಗೂ ತಳುಕು ಹಾಕಿರುವ ಟ್ರಂಪ್, ವಿವಾದವನ್ನು ಸೂಕ್ಷ್ಮವಾಗಿ ಬಗರೆಹರಿಸಬೇಕಿದ್ದು, ತಾವು ಮಧ್ಯಸ್ಥಿಕಗೆ ಸಿದ್ಧ ಎಂದು ಭರವಸೆ ನೀಡಿದ್ದಾರೆ.
ಎರಡು ವಿವಾದಾತ್ಮಕ ಪ್ರಾಂತ್ಯಗಳನ್ನು ಹೊಂದಿರುವ ಭಾರತ-ಪಾಕಿಸ್ತಾನ, ಅದಕ್ಕಾಗಿ ಪರಸ್ಪರ ದ್ವೇಷ ಕಾರುತ್ತಿರುವುದು ಆತಂಕವನ್ನುಂಟು ಮಾಡಿದೆ ಎಂದು ಟ್ರಂಪ್ ಹೇಳಿದ್ದಾರೆ.
ಕಾಶ್ಮೀರ ವಿವಾದಕ್ಕೂ ಧಮರ್ಮಕ್ಕೂ ಸಂಬಂಧವಿದ್ದು, ಧರ್ಮವೇ ಒಂದು ಸಂಕೀರ್ಣ ವಿಚಾರವಾಗಿದೆ ಎಂದು ಅಮೆರಿಕ ಅಧ್ಯಕ್ಷರು ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.