
ನವದೆಹಲಿ, [ಅ.28]: ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಬರಬೇಕು ಎಂದು ಭಾರತ ನೀಡಿದ ಆಮಂತ್ರಣವನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ.
ಆಗಸ್ಟ್ನ ಆರಂಭದಲ್ಲಿ, ಟ್ರಂಪ್ಗೆ ಭಾರತಕ್ಕೆ ಬರಲು ಆಮಂತ್ರಣ ನೀಡಿರುವುದನ್ನ ವೈಟ್ ಹೌಸ್ ಪತ್ರಿಕಾ ಕಾರ್ಯದರ್ಶಿ ಸಾರಾ ಸ್ಯಾಂಡರ್ಸ್ ದೃಢಪಡಿಸಿದ್ದರು. ಆದರೆ, ಇದಿಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 2019ರ ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂಬ ಸುದ್ದಿ ಬಂದಿದೆ.
ಏನು ಕಾರಣ: ಜನವರಿ 26ರ ಸುಮಾರಿಗೆ ಸ್ಟೇಟ್ ಆಫ್ ದಿ ಯುನಿಯನ್ ಅಡ್ರೆಸ್ (ರಾಷ್ಟ್ರದ ಹೆಸರಿನಲ್ಲಿ ಭಾಷಣ) ಕಾರ್ಯಕ್ರಮವಿದೆ. ರಷ್ಯಾದ ಜತೆ ಒಪ್ಪಂದ, ಮಧ್ಯಪ್ರಾಚ್ಯದ ತೈಲ ಗೊಂದಲ ಇನ್ನು ಮುಗಿದಿಲ್ಲ. ಹೀಗಾಗಿ, ಭಾರತ ಸರ್ಕಾರದ ಆಹ್ವಾನವನ್ನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ ಎಂದು ಟ್ರಂಪ್ ಸರ್ಕಾರ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ