
ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ 25 ವರ್ಷಗಳಿಂದ ಖಾಸಗಿ ಕಾರು ಚಾಲಕನಾಗಿದ್ದ ವ್ಯಕ್ತಿಯೊಬ್ಬ ತನಗೆ ಹೆಚ್ಚುವರಿ ಅವಧಿಗೆ ಕೆಲಸ ಮಾಡಿದ್ದಕ್ಕೆ ವೇತನ ನೀಡಿಲ್ಲ ಎಂದು ಆರೋಪಿಸಿ ಮ್ಯಾನ್‌ಹಟನ್ ಸುಪ್ರೀಂಕೋರ್ಟ್‌ನಲ್ಲಿ ಕೇಸು ದಾಖಲಿಸಿದ್ದಾನೆ.
ನೋಯೆಲ್ ಸಿಂಟ್ರಾನ್ (59) ಎಂಬಾತ ಟ್ರಂಪ್‌ಗೆ 2016ರ ಮಧ್ಯಭಾಗದ ವರೆಗೂ ಖಾಸಗಿ ಕಾರು ಚಾಲಕನಾಗಿ ಕಾರ್ಯನಿರ್ವಹಿಸಿದ್ದ. ಟ್ರಂಪ್ ಅಧ್ಯಕ್ಷೀಯ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಆತನನ್ನು ಕೆಲಸದಿಂದ ತೆಗೆಯಲಾಗಿತ್ತು.
‘ಮುಂಜಾನೆ 7 ಗಂಟೆಯಿಂದ ರಾತ್ರಿಯ ವರೆಗೂ ಕಾರ್ಯನಿರ್ವಹಿಸುತ್ತಿದ್ದೆ. ವಾರದಲ್ಲಿ ಕನಿಷ್ಠ 50 ಗಂಟೆಗಳ ಕಾಲ ಹೆಚ್ಚುವರಿಯಾಗಿ ಕೆಲಸ ಮಾಡಿದ್ದೇನೆ. 20 ವರ್ಷದಲ್ಲಿ ಸಾವಿರಾರು ಗಂಟೆ ಹೆಚ್ಚುವರಿಯಾಗಿ ಕೆಲಸ ಮಾಡಿದ್ದೇನೆ. ಇದಕ್ಕಾಗಿ ತನಗೆ ಸುಮಾರು 1.3ಕೋಟಿ ರು.ಗಳಷ್ಟುಹಣವನ್ನು ಟ್ರಂಪ್ ಪಾವತಿಸಬೇಕಿದೆ.
ವಕೀಲರ ಶುಲ್ಕ, ಬಡ್ಡಿ, ಹಾಗೂ ದಂಡವೂ ಸೇರಿ ಸುಮಾರು 2.2 ಕೋಟಿ ರು. ನೀಡಬೇಕು ಎಂದು ದೂರಿನಲ್ಲಿ ಆರೋಪಿಸಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.