ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ: ಪ್ರಜಾಪ್ರಭುತ್ವದ ಸತ್ವ ಸಾರಿದ ಸಿಎಂ

By Web DeskFirst Published Jun 9, 2019, 1:32 PM IST
Highlights

ಅಭಿವೃದ್ಧಿಯೊಂದಿಗೆ ಚುನಾವಣೆ ರಾಜಕೀಯವನ್ನು ಬೆರೆಸುವುದು ಸೂಕ್ತವಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪರೋಕ್ಷವಾಗಿ ಟ್ವೀಟ್ ಮಾಡುವ ಮೂಲಕ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ. ಹಾಗಾದ್ರೆ ಸಿಎಂ ಮಾಡಿರುವ ಟ್ವೀಟ್‌ನಲ್ಲೇನಿದೆ..? ಮುಂದೆ ನೋಡಿ.

ಬೆಂಗಳೂರು, (ಜೂನ್.09):  ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಜಾಪ್ರಭುತ್ವದ ಸತ್ವ  ಸಾರಿದ್ದಾರೆ.

ಗ್ರಾಮ ವಾಸ್ತವ್ಯ ಸೇರಿದಂತೆ ಇತರೆ ಕೆಲಸ ಕಾರ್ಯಗಳ ಬಗ್ಗೆ ವಿರೋಧ ಪಕ್ಷ ಬಿಜೆಪಿಯವರು ಆಕ್ಷೇಪ ವ್ಯಕ್ತಪಡಿಸುತ್ತಿರುವುದಕ್ಕೆ ಕುಮಾರಸ್ವಾಮಿ ಅವರು ಟ್ವಿಟ್ಟರ್‌ನಲ್ಲಿ ಟಾಂಗ್ ಕೊಟ್ಟಿದ್ದಾರೆ.

ಚುನಾವಣೆ ರಾಜಕೀಯವನ್ನು ಅಭಿವೃದ್ಧಿಯೊಂದಿಗೆ ಬೆರೆಸುವುದು ಸೂಕ್ತವಲ್ಲ. ಜನಪ್ರತಿನಿಧಿಗಳಾದ ಹಾಗೂ ಮಂತ್ರಿ ಮಂಡಲದಲ್ಲಿ ಸ್ಥಾನ ಪಡೆದಿರುವ ನಾವೆಲ್ಲರೂ ಪಕ್ಷಾತೀತವಾಗಿ ಜನರ ರಾಜಕೀಯ ಒಲವನ್ನು ಪರಿಗಣಿಸದೆ ಒಟ್ಟಾಗಿ ಅಖಂಡ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ ಎಂದು ಕರೆಕೊಟ್ಟಿದ್ದಾರೆ.

ಚುನಾವಣೆ ರಾಜಕೀಯವನ್ನು ಅಭಿವೃದ್ಧಿಯೊಂದಿಗೆ ಬೆರೆಸುವುದು ಸೂಕ್ತವಲ್ಲ. ಜನಪ್ರತಿನಿಧಿಗಳಾದ ಹಾಗೂ ಮಂತ್ರಿ ಮಂಡಲದಲ್ಲಿ ಸ್ಥಾನ ಪಡೆದಿರುವ ನಾವೆಲ್ಲರೂ ಪಕ್ಷಾತೀತವಾಗಿ ಜನರ ರಾಜಕೀಯ ಒಲವನ್ನು ಪರಿಗಣಿಸದೆ ಒಟ್ಟಾಗಿ ಅಖಂಡ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ. ಇದೇ ಪ್ರಜಾಪ್ರಭುತ್ವದ ಸತ್ವ - ಸಾರ!

— H D Kumaraswamy (@hd_kumaraswamy)
click me!