
ಶ್ರೀನಗರ(ಜೂ.26): ಇತ್ತೀಚೆಗಷ್ಟೇ ಇಲ್ಲಿನ ಜಾಮಾ ಮಸೀದಿ ಹೊರಭಾಗದಲ್ಲಿ ಡಿಎಸ್‌ಪಿ ಮಹಮ್ಮದ್ ಅಯೂ ಬ್ ಪಂಡಿತ್ ಅವರನ್ನು ನಗ್ನಗೊಳಿಸಿ ವಿಕೃತವಾಗಿ ಹತ್ಯೆಗೈದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಈದ್ ಪ್ರಾರ್ಥನೆಗೆ ತೆರಳಬೇಡಿ ಎಂದು ತನ್ನ ಸಿಬ್ಬಂದಿಗೆ ಜಮ್ಮು-ಕಾಶ್ಮೀರ ಪೊಲೀಸ್ ಇಲಾಖೆ ಸೂಚಿಸಿದೆ. ಜಿಲ್ಲಾ ಪೊಲೀಸ್ ವ್ಯಾಪ್ತಿಗೊಳಪಡುವ ಮಸೀದಿ ಅಥವಾ ರಕ್ಷಣೆ ಒದಗಿಸಲಾದ ಮಸೀದಿಗಳಲ್ಲಿ ಮಾತ್ರ ರಂಜಾನ್ ಹಬ್ಬದ ಪ್ರಯುಕ್ತದ ಈದ್ ಪ್ರಾರ್ಥನೆ ಮಾಡುವಂತೆ ಪೊಲೀಸ್ ಸಿಬ್ಬಂದಿಗಳಿಗೆ ಸಲಹೆ ನೀಡಲಾಗಿದೆ. ಯಾವುದೇ ಅಹಿತಕರ ಘಟನೆ ತಡೆಗಾಗಿ ರಾಜ್ಯ ಪೊಲೀಸ್ ಇಲಾಖೆ ಈ ಕರೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.