
ನವದೆಹಲಿ: ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ತಮ್ಮನ್ನು ಆಹ್ವಾನಿಸುವ ವೇಳೆ ಪಾದವನ್ನು ಮುಟ್ಟಿನಮಸ್ಕರಿಸುವ ಪದ್ಧತಿಯನ್ನು ಬಿಡುವಂತೆ ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ ಸೂಚನೆ ನೀಡಿದ್ದಾರೆ.
‘ಪಕ್ಷದ ಕಾರ್ಯಕರ್ತರು ನೀಡುವ ಗೌರವಕ್ಕೆ ಮಾಯವತಿಯವರಿಗೆ ಸಂತೋಷವಿದೆ. ಆದರೆ ಇದು ಸರಿಯಲ್ಲ. ಕಾರ್ಯಕರ್ತರು ಈ ಕ್ರಮವನ್ನು ನಿಲ್ಲಿಸಬೇಕೆಂದು ಆದೇಶ ಹೊರಡಿಸಿದ್ದಾರೆ’ ಎಂದು ಬಿಎಸ್‌ಪಿ ರಾಜ್ಯಸಬಾ ಸದಸ್ಯ ಮುನ್ಕದ್ ಆಲಿ ಹೇಳಿದ್ದಾರೆ.
ಬಿಎಸ್‌ಪಿ ಯು ದಲಿತ ನಾಯಕ ಅಂಬೇಡ್ಕರ್ ಅವರ ಚಿಂತನೆಗಳಿಂದ ಪ್ರಭಾವಿತವಾದ ಪಕ್ಷವಾಗಿದ್ದು, ಅಸಮಾನತೆಯನ್ನು ವಿರೋಧಿಸುತ್ತದೆ. ಹಾಗಾಗಿ ಪಕ್ಷದ ನಾಯಕರನ್ನು ಆಹ್ವಾನಿಸುವಾಗ ‘ಜೈಭೀಮ್’ ಎಂಬ ಘೋಷವಾಕ್ಯ ಬಳಸುವುದು ಸೂಕ್ತ ಎಂದು ಕಾರ್ಯಕರ್ತರು ಕೂಡ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.