
ನವದೆಹಲಿ (ಅ.07): ದೆಹಲಿ ಮೆಟ್ರೋದರ ಹೆಚ್ಚಳವನ್ನು ಕಡಿಮೆ ಮಾಡುವುದಾದರೆ ಮುಂದಿನ 5 ವರ್ಷಗಳ ಕಾಲ ಸರ್ಕಾರ ವಾರ್ಷಿಕ 3 ಸಾವಿರ ಕೋಟಿ ಹಣವನ್ನು ಪಾವತಿಸಬೇಕಾಗುತ್ತದೆ. ಆಮ್ ಆದ್ಮಿ ಮುಂದೆ ದೊಡ್ಡ ಸವಾಲಿದೆ ಎಂದು ಕೇಂದ್ರ ಗೃಹ ಹಾಗೂ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
ಪ್ರತಿನಿತ್ಯ ದೆಹಲಿ ಮೆಟ್ರೋದಲ್ಲಿ 27 ಲಕ್ಷ ಮಂದಿ ಪ್ರಯಾಣಿಸುತ್ತಾರೆ. ಕಳೆದ 8 ವರ್ಷಗಳಲ್ಲಿ 2 ನೇ ಬಾರಿಗೆ ಮೆಟ್ರೋ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಅರವಿಂದ್ ಕೇಜ್ರಿವಾಲರ ಈ ನಿರ್ಧಾರ ಜನ ವಿರೋಧಿಯಾದದ್ದು ಎಂದು ಹರ್ದೀಪ್ ಸಿಂಗ್ ಹೇಳಿದ್ದಾರೆ.
ಒಂದು ವೇಳೆ ಸರ್ಕಾರ ಮೆಟ್ರೋ ದರವನ್ನು ಹೆಚ್ಚಿಸಿದರೆ ಅದನ್ನು ತಡೆಯುವ ಅಧಿಕಾರ ನಮಗಿಲ್ಲ. ಆದರೆ ನಾವು ಇದನ್ನು ಪರಿಗಣಿಸಿ ಸರ್ಕಾರವನ್ನು ಪ್ರಶ್ನಿಸುತ್ತೇವೆ ಎಂದಿದ್ದಾರೆ.
ಈ ವರ್ಷ ದೆಹಲಿ ಮೆಟ್ರೋದಲ್ಲಿ ಈಗಾಗಲೇ ಕನಿಷ್ಠ ದರ 8 ರಿಂದ 10 ಕ್ಕೇರಿಸಲಾಗಿದೆ. ಗರಿಷ್ಠ ದರ 30 ರಿಂದ 50 ಕ್ಕೇರಿಸಲಾಗಿದೆ. ಈಗ ಮತ್ತೊಮ್ಮೆ ಹೆಚ್ಚು ಮಾಡಿದರೆ ಪ್ರಿ 2 ಕಿಲೋಮೀಟರ್’ಗೆ 5-10 ರೂ ಹೆಚ್ಚು ನೀಡಬೇಕಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.