ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಮಾರಾಮಾರಿಗೆ ಬಿತ್ತು 2 ಹೆಣ

Published : Dec 26, 2016, 03:41 AM ISTUpdated : Apr 11, 2018, 12:54 PM IST
ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ  ಮಾರಾಮಾರಿಗೆ ಬಿತ್ತು 2 ಹೆಣ

ಸಾರಾಂಶ

ಕುಡಿಯುವ ನೀರು ಮತ್ತು ಫ್ಲೆಕ್ಸ್ ಕಟ್ಟುವ ವಿಚಾರದಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತೊಪದಪನಹಳ್ಳಿ ಗ್ರಾಮದಲ್ಲಿ  2 ದಿನದ ಹಿಂದೆ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ  ಮಾರಮಾರಿ ನಡೆದಿತ್ತು. 

ಮಂಡ್ಯ(ಡಿ.26): ಹಳೆಯ ರಾಜಕೀಯ ದ್ವೇಷಕ್ಕೆ ಮಂಡ್ಯದ ಮದ್ದೂರು ತಾಲೂಕಿನಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಜೆಡಿಎಸ್ ಕಾರ್ಯಕರ್ತರ ಕೊಲೆಯಾಗಿ, ಹಲವರು ಗಾಯಗೊಂಡಿದ್ದಾರೆ. ನಂದೀಶ್ ಮತ್ತು ಮುತ್ತುರಾಜು ಕೊಲೆಯಾದವರು. ಕುಡಿಯುವ ನೀರು ಮತ್ತು ಫ್ಲೆಕ್ಸ್ ಕಟ್ಟುವ ವಿಚಾರದಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತೊಪದಪನಹಳ್ಳಿ ಗ್ರಾಮದಲ್ಲಿ  2 ದಿನದ ಹಿಂದೆ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ  ಮಾರಮಾರಿ ನಡೆದಿತ್ತು.  ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಎರಡು ಕಡೆಯವರನ್ನು ಸಮಾಧಾನ ಪಡಿಸಿ ಸುಮ್ಮನಾಗಿಸಿದ್ದರು. ಆದರೆ ಭಾನುವಾರ ರಾತ್ರಿ ೮ ಗಂಟೆ ವೇಳೆಗೆ ಮತ್ತೆ ಎರಡು ಕಡೆಯವರು  ಪರಸ್ಪರ ಬಡಿದಾಡಿಕೊಂಡಿದ್ದಾರೆ.

ಈ ವೇಳೆ ಜೆಡಿಎಸ್ ಕಾರ್ಯಕರ್ತರಾದ ನಂದೀಶ್ ಮತ್ತು ಮುತ್ತುರಾಜು ಎಂಬುವರನ್ನು ಕೊಲೆ ಮಾಡಲಾಗಿದೆ.  ಮಾರಾಮಾರಿಯಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ಮದ್ದೂರು ಸಾರ್ವಜನಿಕ ಆಸ್ಪತ್ರೆ ಹಾಗೂ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನೇಗೌಡ ಮತ್ತು ಹೊನ್ನಯ್ಯ ಎಂಬುವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಕಾಂಗ್ರೆಸ್ ಕಾರ್ಯಕರ್ತರ ವರ್ತನೆಯೇ ಕಾರಣವಾಗಿದ್ದು, ಬೆಂಗಳೂರಿನಿಂದ ಹುಡುಗರನ್ನು ಕರೆಸಿ ಕೊಲೆ ಮಾಡಲಾಗಿದೆ  ಎಂಬುದು ಜೆಡಿಎಸ್ ಕಾರ್ಯಕರ್ತರ ಆರೋಪವಾಗಿದೆ.

ಮದ್ದೂರು ಪೊಲೀಸರು ಮದ್ದೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರಾದ ಮುತ್ತುರಾಜ್,ಶಿವು ಹಾಗು ಹೇಮಂತ್ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಬಿಗಿಭದ್ರತೆ ಕಲ್ಪಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಶಸ್ತಿ ಸಮಾರಂಭಕ್ಕೆ ‘ಡ್ಯೂಪ್’ ಕಳಿಸಿ ಬೇಸ್ತು ಬೀಳಿಸಿದ್ರಾ ನಟಿ ಅದಾ ಶರ್ಮಾ..? ‘AI ತದ್ರೂಪು’ ಕಳಿಸಿದ್ದು ನಿಜಾನಾ?
ರಾಮೇಶ್ವರಂ ಕೆಫೆಗೆ ಬಿಗ್ ರಿಲೀಫ್: ವಿಮಾನ ನಿಲ್ದಾಣ ಮಳಿಗೆ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ