
ಮಂಡ್ಯ(ಅ.20): ಮಂಡ್ಯ ಜಿಲ್ಲೆಯಲ್ಲಿ ಚುನಾವಣೆಗೂ ಮುನ್ನವೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಇದೀಗ ಶ್ರೀರಂಗಪಟ್ಟಣ ಕ್ಷೇತ್ರಕ್ಕೆ ಜ್ಯೋತಿಷಿ ಹಾಗೂ ಕಟ್ಟಾ ಹಿಂದೂವಾದಿಯಾಗಿರುವ ಡಾ. ಭಾನುಪ್ರಕಾಶ್ ಶರ್ಮಾರನ್ನು ಕಣಕ್ಕಿಳಿಸಲು ಮುಂದಾಗಿದೆ. ಸಂಘಪರಿವಾರದ ಮೂಲಕ ಒಂದೆರಡು ಸುತ್ತಿನ ಮಾತುಕತೆ ನಡೆಸಿದೆ ಅಂತ ಹೇಳಲಾಗುತ್ತಿದೆ.
ಇತ್ತೀಚೆಗಷ್ಟೆ ಶ್ರೀರಂಗಪಟ್ಟಣದಲ್ಲಿ ಯಶಸ್ವಿಯಾಗಿ ಕಾವೇರಿ ಪುಷ್ಕರ ನಡೆಸಿ ಲಕ್ಷಾಂತರ ಭಕ್ತಗಣದಲ್ಲಿ ಹೆಸರು ಮಾಡಿರುವ ಡಾ.ಭಾನುಪ್ರಕಾಶ್ ಶರ್ಮಾರನ್ನು ಶ್ರೀರಂಗಪಟ್ಟಣ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.
ಆದರೆ ಈ ಬಗ್ಗೆ ಡಾ. ಭಾನು ಪ್ರಕಾಶ್ ಮಾತ್ರ, ನಾನು ಸದ್ಯಕ್ಕೆ ಧಾರ್ಮಿಕ ಕಾರ್ಯದಲ್ಲಿ ಬ್ಯುಸಿಯಾಗಿದ್ದು ಮುಂದಿನ ದಿನಗಳಲ್ಲಿ ಜನರ ಅಭಿಪ್ರಾಯ ಪಡೆದು ಪ್ರತಿಕ್ರಿಯಿಸುವುದಾಗಿ ಹೇಳೋ ಮೂಲಕ ಅಡ್ಡಗೋಡೆ ಮೇಲೆ ದೀಪ ಇಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.