
ಈರೋಡ್(ಸೆ.25): 18 ವರ್ಷಗಳ ಹಿಂದೆ ಕನ್ನಡದ ವರನಟ ರಾಜ್‌ಕುಮಾರ್ ಅವರನ್ನು, ದಂತಚೋರ ವೀರಪ್ಪನ್ ಮತ್ತು ಆತನ ಸಂಗಡಿಗರು ಅಪಹರಣ ಮಾಡಿದ್ದ ಪ್ರಕರಣ ಸಂಬಂಧ ದಾಖಲಾಗಿದ್ದ ಕೇಸಿನ ತೀರ್ಪು ಇಂದು ಪ್ರಕಟವಾಗಲಿದೆ. ಈರೋಡ್ ಜಿಲ್ಲೆಯ ಗೋಪಿಚೆಟ್ಟಿಪಾಳ್ಯಂನ ನ್ಯಾಯಾಲಯ ಈ ತೀರ್ಪು ಪ್ರಕಟಿಸಲಿದೆ.
2000ನೇ ಇಸವಿ ಜುಲೈ 30ರಂದು ತಮಿಳುನಾಡಿನ ಗಡಿಭಾಗದಲ್ಲಿರುವ ಗಾಜನೂರಿನ ಮನೆಯಿಂದ ರಾಜ್‌ಕುಮಾರ್ ಅವರನ್ನು ವೀರಪ್ಪನ್ ಅಪಹರಿಸಿದ್ದ. ಈ ವಿಷಯ ತಮಿಳುನಾಡು ಮತ್ತು ಕರ್ನಾಟಕದಲ್ಲಿ ಭಾರೀ ಹಿಂಸಾಚಾರಕ್ಕೆ ಕಾರಣವಾಗಿತ್ತು. ರಾಜ್ ಬಿಡಿಸಲು ಉಭಯ ರಾಜ್ಯಗಳು ಭಾರೀ ಶ್ರಮವಹಿಸಿದ್ದವು. ಅಂತಿಮವಾಗಿ 108 ದಿನದ ಬಳಿಕ ರಾಜ್‌ರನ್ನು, ವೀರಪ್ಪನ್ ಯಾವುದೇ ತೊಂದರೆ ಇಲ್ಲದೆ ಬಿಡುಗಡೆ ಮಾಡಿದ್ದ.
ಈ ಸಂಬಂಧ ವೀರಪ್ಪನ್ ಸೇರಿದಂತೆ 8 ಜನರ ವಿರುದ್ಧ ಆರೋಪಪಟ್ಟಿ ಹೊರಿಸಲಾಗಿತ್ತು. ಆದರೆ ವಿಚಾರಣೆ ವೇಳೆ ವೀರಪ್ಪನ್, ಸೇತುಕುಡಿ ಗೋವಿಂದನ್, ರಂಗಸಾಮಿ ಸಾವನ್ನಪ್ಪಿದ್ದರು. ಉಳಿದ 5 ಜನ ಹಾಲಿ ಪ್ರಕರಣ ಸಂಬಂಧ ಜೈಲು ಸೇರಿದ್ದಾರೆ. 2004ರಲ್ಲಿ ವೀರಪ್ಪನ್ ಪೊಲೀಸರ ಗುಂಡಿಗೆ ಬಲಿಯಾಗಿದ್ದ. 2006ರಲ್ಲಿ ರಾಜ್ ನಿಧನರಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.