ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿದರೆ ಜೈಲು ಖಚಿತ

Published : May 05, 2017, 04:54 AM ISTUpdated : Apr 11, 2018, 12:44 PM IST
ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿದರೆ ಜೈಲು ಖಚಿತ

ಸಾರಾಂಶ

ರಾತ್ರಿ ವೇಳೆ ಪ್ರವಾಸಿಗರು ಬೀಚ್‌'ಗಳಲ್ಲಿ ಮದ್ಯಪಾನ ಮಾಡುವುದರಿಂದಾಗುತ್ತಿರುವ ಸಮಸ್ಯೆಗಳ ಬಗ್ಗೆ ಸಭೆಯಲ್ಲಿದ್ದವರು ಗಮನ ಸೆಳೆದಿದ್ದರು. 

ಪಣಜಿ(ಮೇ.05): ಗೋವಾದಲ್ಲಿ ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿದರೆ, ಜೈಲಿಗೆ ಹೋಗಬೇಕಾದೀತು.

 ಪ್ರವಾಸಿ ರಾಜ್ಯವಾದ ಗೋವಾದಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಮದ್ಯಪಾನ ಮಾಡುವವರು ಕಂಡು ಬಂದರೆ, ಅವರನ್ನು ಬಂಧಿಸುವಂತೆ ಪೊಲೀಸರಿಗೆ ನಿರ್ದೇಶಿಸಲಾಗಿದೆ. ಐಪಿಸಿ ಕಲಂ 34ರನ್ವಯ ಇಂಥವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಉತ್ತರ ಗೋವಾ ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತಿಕ್‌ ಕಶ್ಯಪ್‌ ಹೇಳಿದ್ದಾರೆ.

ಸಾರ್ವಜನಿಕರು, ಪ್ರವಾಸೋದ್ಯಮ ವಲಯದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ರಾತ್ರಿ ವೇಳೆ ಪ್ರವಾಸಿಗರು ಬೀಚ್‌'ಗಳಲ್ಲಿ ಮದ್ಯಪಾನ ಮಾಡುವುದರಿಂದಾಗುತ್ತಿರುವ ಸಮಸ್ಯೆಗಳ ಬಗ್ಗೆ ಸಭೆಯಲ್ಲಿದ್ದವರು ಗಮನ ಸೆಳೆದಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಾಮರಾಜನಗರ: ಚಿನ್ನದ ಆಸೆಗೆ ಗುಡ್ಡವನ್ನೇ ಅಗೆದ ಕಿಡಿಗೇಡಿಗಳು!
India Latest News Live: ಪಂಜಾಬ್‌ನ 3 ಸ್ಥಳಗಳಿನ್ನು ಪವಿತ್ರ ನಗರಿ: ಮದ್ಯ, ಮಾಂಸ ಸೇಲ್‌ ನಿಷೇಧ