ಆಟೋ ಪ್ರಯಾಣ ದರ ಹೆಚ್ಚಳ ವಿಳಂಬಕ್ಕೆ ಜಿಲ್ಲಾಧಿಕಾರಿ ವಿರುದ್ಧ ಚಾಲಕರ ಆಕ್ರೋಶ

Published : Jun 24, 2025, 05:03 AM ISTUpdated : Jun 24, 2025, 05:04 AM IST
Bengaluru auto

ಸಾರಾಂಶ

ಆಟೋ ಪ್ರಯಾಣ ದರ ಹೆಚ್ಚಳ ಆದೇಶ ಹೊರಡಿಸುವಲ್ಲಿ ವಿಳಂಬ ಮಾಡುತ್ತಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಆಟೋ ಚಾಲಕರ ಸಂಘಟನೆಗಳು, ಜೂ.25ರೊಳಗೆ ದರ ಹೆಚ್ಚಳಕ್ಕೆ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು : ಆಟೋ ಪ್ರಯಾಣ ದರ ಹೆಚ್ಚಳ ಆದೇಶ ಹೊರಡಿಸುವಲ್ಲಿ ವಿಳಂಬ ಮಾಡುತ್ತಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಆಟೋ ಚಾಲಕರ ಸಂಘಟನೆಗಳು, ಜೂ.25ರೊಳಗೆ ದರ ಹೆಚ್ಚಳಕ್ಕೆ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬಸ್‌ ದರ ಹೆಚ್ಚಳದ ನಂತರದಿಂದ ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಆಟೋ ಚಾಲಕರು ಆಗ್ರಹಿಸುತ್ತಲೇ ಇದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಅವರುಆಟೋ ಚಾಲಕರು-ಮಾಲೀಕರ ಸಂಘಗಳ ಪ್ರಮುಖರೊಂದಿಗೆ ಈಗಾಗಲೇ ಎರಡ್ಮೂರು ಬಾರಿ ಸಭೆಯನ್ನೂ ನಡೆಸಿದ್ದಾರೆ. ಸಭೆಯಲ್ಲಿ ಕನಿಷ್ಠ ದರ 30 ರು.ನಿಂದ 40 ರು.ಗೆ ಹಾಗೂ ಆನಂತರ ಪ್ರತಿ ಕಿಮೀ ದರ 15 ರು.ನಿಂದ 20 ರು.ಗೆ ಹೆಚ್ಚಿಸುವಂತೆ ಆಟೋ ಚಾಲಕರ ಸಂಘಗಳ ಪ್ರಮುಖರು ಪ್ರಸ್ತಾವನೆ ಸಲ್ಲಿಸಿದ್ದರು. ಅಂತಿಮವಾಗಿ ಕನಿಷ್ಠ ದರ 38 ರು. ಹಾಗೂ ಆನಂತರ ಪ್ರತಿ ಕಿಮೀ ದರ 18 ರು.ಗೆ ನಿಗದಿ ಮಾಡಲಾಗಿತ್ತು.

ಆದರೆ, ಆ ಕುರಿತು ಈವರೆಗೆ ಅಧಿಕೃತ ಆದೇಶ ಹೊರಡಿಸಿಲ್ಲ. ಹೀಗಾಗಿ ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಅಧಿಕೃತ ಆದೇಶ ಹೊರಡಿಸುವಂತೆ ಆಟೋ ಚಾಲಕರ ಸಂಘಟನೆಗಳು ಆಗ್ರಹಿಸುತ್ತಿವೆ. ಜೂ. 25ರೊಳಗೆ ಆದೇಶ ಹೊರಡಿಸಬೇಕು, ಇಲ್ಲದಿದ್ದರೆ ನಗರದ ಆಟೋ ಚಾಲಕರು ಪ್ರತಿಭಟನೆ ನಡೆಸುವುದಾಗಿ ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮೆಹಂದಿ ಗಿಡ ಪೂಜಿಸಿದರೆ ಇಷ್ಟೆಲ್ಲಾ ಲಾಭವಿದೆಯೇ?: ಪೂಜೆಗೆ ಇದೇ ಸರಿಯಾದ ದಿನ!
Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!