ಸಚಿವ ಅನಂತ್ ಹೆಗಡೆ ಸಂಪುಟದಿಂದ ಕೈಬಿಡಿ

Published : Feb 01, 2018, 06:31 PM ISTUpdated : Apr 11, 2018, 12:56 PM IST
ಸಚಿವ ಅನಂತ್ ಹೆಗಡೆ ಸಂಪುಟದಿಂದ ಕೈಬಿಡಿ

ಸಾರಾಂಶ

ದಲಿತರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರನ್ನು ಕೇಂದ್ರ ಸಂಪುಟದಿಂದ ಕೈ ಬಿಡಬೇಕು ನಂತಕುಮಾರ್ ಹೆಗಡೆ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ದಲಿತರ ಕುರಿತ ಹೇಳಿಕೆಯ ವಿರುದ್ಧ ಕ್ಷಮೆ ಕೋರಬೇಕು

ಬೆಂಗಳೂರು: ದಲಿತರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರನ್ನು ಕೇಂದ್ರ ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಡಾ.ಬಿ.ಆರ್.ಅಂಬೇಡ್ಕರ್ ಕನ್ನಡ ಯುವಕ ಸಂಘದ ಕಾರ್ಯಕರ್ತರು ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಶೇಷಾದ್ರಿಪುರದ ಕೃಷ್ಣಾ ಫ್ಲೋರ್ ಮಿಲ್‌ನಿಂದ ಪ್ರಾರಂಭವಾದ ಮೆರವಣಿಗೆ ಶೇಷಾದ್ರಿಪುರದ ರಾಜೀವ್‌ಗಾಂಧಿ ವೃತ್ತದವರೆಗೂ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೂರಾರು ಪ್ರತಿಭಟನಾಕಾರರು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ವೆಂಕಟರಮಣ, ಸಂವಿಧಾನಕ್ಕೆ ಅಪಮಾನ ಮಾಡಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ, ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು. ಹಾಗೂ ದಲಿತರ ಕುರಿತ ಹೇಳಿಕೆಯ ವಿರುದ್ಧ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.

ಸಂಘದ ಕಾರ್ಯಾಧ್ಯಕ್ಷ ಮುರಳಿ ಮಾತನಾಡಿ, ಅನಂತಕುಮಾರ್ ಹೆಗಡೆ ಕ್ಷಮೆ ಕೇಳದಿದ್ದಲ್ಲಿ ಮುಂದಿನ ದಿನದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆಧಾರ್‌ ಲಿಂಕ್‌ ಕಮಾಲ್‌, ಒಂದೇ ವರ್ಷದಲ್ಲಿ 3 ಕೋಟಿ ಫೇಕ್‌ IRCTC ಅಕೌಂಟ್‌ ಬಂದ್‌ ಮಾಡಿದ ಭಾರತೀಯ ರೈಲ್ವೇ!
ಕಾರವಾರ: ಉಂಡ‌ ಮನೆಗೆ ದ್ರೋಹ; ಮನೆ ಕೆಲಸದವನಿಂದಲೇ ಲಕ್ಷಾಂತರ ರೂಪಾಯಿ ಕದ್ದವನ ಬಂಧನ