ರೋಹಿತ್ ವೆಮುಲಾ ಬಳಿಕ ಇದೀಗ ಆತ್ಮಹತ್ಯೆಗೆ ಶರಣಾದ ಜೆಎನ್‌ಯು ವಿವಿ ದಲಿತ ವಿದ್ಯಾರ್ಥಿ

Published : Mar 14, 2017, 07:18 AM ISTUpdated : Apr 11, 2018, 12:40 PM IST
ರೋಹಿತ್ ವೆಮುಲಾ ಬಳಿಕ ಇದೀಗ ಆತ್ಮಹತ್ಯೆಗೆ ಶರಣಾದ ಜೆಎನ್‌ಯು ವಿವಿ ದಲಿತ ವಿದ್ಯಾರ್ಥಿ

ಸಾರಾಂಶ

ಹೈದರಾಬಾದ್ ವಿವಿಯ ಪ್ರತಿಭಾವಂತ ರೋಹಿತ್ ವೇಮುಲಾ ಅವರ ಆತ್ಮಹತ್ಯೆ ದೇಶಾದ್ಯಂತ ಹೋರಾಟದ ಕಿಚ್ಚು ಹಚ್ಚಿರುವ ಬೆನ್ನಿಗೇ, ಇದೀಗ ಹೊಸದಿಲ್ಲಿಯ ಜೆಎನ್‌ಯು ವಿವಿ ದಲಿತ ಸಂಶೋಧನಾ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದು  ದೇಶವನ್ನು ದಿಗ್ಭ್ರಾಂತಗೊಳಿಸಿದೆ.

ನವದೆಹಲಿ(ಮಾ.14): ಹೈದರಾಬಾದ್ ವಿವಿಯ ಪ್ರತಿಭಾವಂತ ರೋಹಿತ್ ವೇಮುಲಾ ಅವರ ಆತ್ಮಹತ್ಯೆ ದೇಶಾದ್ಯಂತ ಹೋರಾಟದ ಕಿಚ್ಚು ಹಚ್ಚಿರುವ ಬೆನ್ನಿಗೇ, ಇದೀಗ ಹೊಸದಿಲ್ಲಿಯ ಜೆಎನ್‌ಯು ವಿವಿ ದಲಿತ ಸಂಶೋಧನಾ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದು  ದೇಶವನ್ನು ದಿಗ್ಭ್ರಾಂತಗೊಳಿಸಿದೆ.

ಮೃತ ವಿದ್ಯಾರ್ಥಿಯನ್ನು  ಮುತ್ತು ಕೃಷ್ಣನ್  ಎಂದು ಗುರುತಿಸಲಾಗಿದೆ. ಸೀಟು ಹಂಚಿಕೆಯಲ್ಲಿ ದಲಿತ ವರ್ಗಕ್ಕೆ ಆಗುತ್ತಿರುವ ಅನ್ಯಾಯಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು, ಸಾಮಾಜಿಕ ತಾಣದಲ್ಲಿ ಆತ ಹಾಕಿರುವ ಕೊನೆಯ ಹೇಳಿಕೆಯಿಂದ ಬಹಿರಂಗವಾಗಿದೆ.

ರೋಹಿತ್ ವೇಮುಲಾ ಪರವಾಗಿ ಧ್ವನಿಯೆತ್ತಿದ ಜೆಎನ್‌ಯು ವಿದ್ಯಾರ್ಥಿ ಮುಖಂಡ ಕನ್ಹಯ್ಯ ಮತ್ತು ಅವರ ಗೆಳೆಯರನ್ನು ದೇಶದ್ರೋಹ ಆರೋಪದಲ್ಲಿ ಕೇಂದ್ರ ಸರಕಾರ ಜೈಲಿಗೆ ತಳ್ಳಿರುವುದು ದೇಶಾದ್ಯಂತ ಆಂದೋಲನಕ್ಕೆ ಕಾರಣವಾಗಿತ್ತು. ಈಗ ರಜನಿಕ್ರಿಶ್ ಎನ್ನುವ ದಲಿತ ಪ್ರತಿಭಾವಂತ ವಿದ್ಯಾರ್ಥಿ ಆತ್ಮಹತ್ಯೆ ಗೈದಿರುವುದು ದೇಶದ ಯುವ ಸಮೂಹವನ್ನು ಮತ್ತೆ ತತ್ತರಿಸುವಂತೆ ಮಾಡಿದೆ.

ದಲಿತ ವಿದ್ಯಾರ್ಥಿಯ ಈ ಆತ್ಮಹತ್ಯೆ ಪ್ರಕರಣಕ್ಕೆ ದೇಶದ ಮೂಲೆ ಮೂಲೆಗಳಿಂದ ತೀವ್ರ ವಿಷಾದ ಮತ್ತು ಖಂಡನೆ ವ್ಯಕ್ತವಾಗುತ್ತಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ಯಾರಂಟಿ ಹೆಸರಿನಲ್ಲಿ ಕಾಲಹರಣ ಮಾಡುವ ಕೆಲಸ ಆಗುತ್ತಿದೆ: ಛಲವಾದಿ ನಾರಾಯಣಸ್ವಾಮಿ
ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ