
ದುಬೈ(ನ.19): ಬಹುಕೋಟಿ ವಿವಿಐಪಿ ಚಾಪರ್ ಹಗರಣದಲ್ಲಿ ಭಾರತಕ್ಕೆ ಬೇಕಾಗಿದ್ದ ಪ್ರಮುಖ ಆರೋಪಿ, ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಗಡಿಪಾರಿಗೆ ದುಬೈ ಕೋರ್ಟ್ ಆದೇಶ ನೀಡಿದೆ.
ದುಬೈನಲ್ಲಿ ಬಂಧನಕ್ಕೊಳಗಾಗಿರುವ ಕ್ರಿಶ್ಚಿಯನ್ ಮೈಕೆಲ್‌ನನ್ನು ಗಡಿಪಾರು ಮಾಡಬಹುದೆಂದು ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ದುಬೈ ಉಚ್ಛ ನ್ಯಾಯಾಲಯ ಎತ್ತಿ ಹಿಡಿದಿದ್ದು ಮೈಕೆಲ್ ಗಡಿಪಾರಿಗೆ ತನ್ನ ಅಭ್ಯಂತರ ಇಲ್ಲ ಎಂದು ಹೇಳಿದೆ.
3,600 ಕೋಟಿ ರೂಪಾಯಿ ಮೊತ್ತದ ವಿವಿಐಪಿ ಚಾಪರ್ ಹಗರಣದಲ್ಲಿ ಭಾರತಕ್ಕೆ ಬೇಕಾಗಿರುವ ಕ್ರಿಶ್ಚಿಯನ್ ಮೈಕೆಲ್ ಗಡಿಪಾರು ಆದೇಶ ಭಾರತಕ್ಕೆ ಸಹಕಾರಿಯಾಗಲಿದೆ. ಗಡಿಪಾರು ಮಾಡುವ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದ ಮೈಕೆಲ್ ಪರ ವಕೀಲರು ಇಟಲಿ ಹಾಗೂ ಸ್ವಿಟ್ಜರ್ಲ್ಯಾಂಡ್ ಕೋರ್ಟ್‌ಗಳು ಬ್ರಿಟನ್ ಪ್ರಜೆ ಕ್ರಿಶ್ಚಿಯನ್ ಮೈಕೆಲ್ ನನ್ನು ಗಡಿಪಾರು ಮಾಡದಂತೆ ನೀಡಿದ್ದ ಆದೇಶವನ್ನು ಉಲ್ಲೇಖಿಸಿದ್ದರು.
ಮೈಕೆಲ್ ಪಾಸ್‌ಪೋರ್ಟ್‌ನ್ನು ವಶಕ್ಕೆ ಪಡೆದಿದ್ದ ದುಬೈ ನ್ಯಾಯಾಂಗ ಅಧಿಕಾರಿಗಳು ಸೆ.2 ರಂದು ಆತನನ್ನು ವಾಂಟೆಡ್ ಎಂದು ಘೋಷಿಸಿದ್ದರು. ಈಗ ಭಾರತಕ್ಕೆ ಬೇಕಾಗಿರುವ ಆರೋಪಿಯನ್ನು ದುಬೈ ನ್ಯಾಯಾಲಯ ಗಡಿಪಾರು ಮಾಡಲು ಸೂಚನೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.