ದುನಿಯಾ ವಿಜಿಗೆ ಜೈಲೋ , ಬೇಲೋ?

Published : Sep 26, 2018, 08:43 AM IST
ದುನಿಯಾ ವಿಜಿಗೆ ಜೈಲೋ , ಬೇಲೋ?

ಸಾರಾಂಶ

ಜೈಲು ಸೇರಿರುವ ನಟ ದುನಿಯಾ ವಿಜಯ್‌ ಅವರ ಜಾಮೀನು ಅರ್ಜಿಯ ತೀರ್ಪು ಬುಧವಾರ ಹೊರಬೀಳಲಿದ್ದು, ವಿಜಯ್‌ಗೆ ಜೈಲೋ, ಬೇಲೋ ಎಂಬುದು ನಿರ್ಧಾರವಾಗಲಿದೆ. 

ಬೆಂಗಳೂರು :  ಜಿಮ್‌ ತರಬೇತುದಾರನ ಅಪಹರಣ ಮತ್ತು ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪದಲ್ಲಿ ಜೈಲು ಸೇರಿರುವ ನಟ ದುನಿಯಾ ವಿಜಯ್‌ ಅವರ ಜಾಮೀನು ಅರ್ಜಿಯ ತೀರ್ಪು ಬುಧವಾರ ಹೊರಬೀಳಲಿದ್ದು, ವಿಜಯ್‌ಗೆ ಜೈಲೋ, ಬೇಲೋ ಎಂಬುದು ನಿರ್ಧಾರವಾಗಲಿದೆ.

ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನಗರದ ಎಂಟನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ಮಹೇಶ್‌ ಬಾಬು ಅವರು ಜಾಮೀನು ಅರ್ಜಿಯ ಅಂತಿಮ ಆದೇಶ ಕಾಯ್ದಿರಿಸಿದ್ದು, ಬುಧವಾರ ಪ್ರಕಟಿಸಲಿದ್ದಾರೆ.

ಸೆ.22 ರಂದು ಅಂಬೇಡ್ಕರ್‌ ಭವನದಲ್ಲಿ ನಡೆಯುತ್ತಿದ್ದ ದೇಹದಾಢ್ರ್ಯ ಸ್ಪರ್ಧೆಗೆ ತೆರಳಿದ್ದ ದುನಿಯಾ ವಿಜಯ್‌ ಹಾಗೂ ಅವರ ಸಹಚರರು ಕ್ಷುಲ್ಲಕ ಕಾರಣಕ್ಕೆ ಜಿಮ್‌ ತರಬೇತುದಾರ ಮಾರುತಿಗೌಡನ ಮೇಲೆ ಹಲ್ಲೆ ನಡೆಸಿ, ಕಾರಿನಲ್ಲಿ ಅಪಹರಣ ಮಾಡಿದ್ದರು. ಪ್ರಕರಣ ಸಂಬಂಧ ವಿಜಯ್‌ ಹಾಗೂ ಸಹಚರರಾದ ಪ್ರಸಾದ್‌, ಕಾರು ಚಾಲಕ ಪ್ರಸಾದ್‌ ಕುಮಾರ್‌ ಹಾಗೂ ಮಣಿ ಎಂಬಾತನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು.

ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದುನಿಯಾ ವಿಯಜ್‌ ಜಾಮೀನು ಅರ್ಜಿ ಸಲ್ಲಿಸಿದ್ದು, ಅರ್ಜಿಯ ಅಂತಿಮ ಆದೇಶ ಬುಧವಾರ ಪ್ರಕಟವಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಬಸ್ 3 ಕಾರುಗಳ ಮಧ್ಯೆ ಸರಣಿ ಅಪಘಾತ : ನಾಲ್ವರು ಬೆಂಕಿಗಾಹುತಿ
ಕೇಂದ್ರ, ಮೋದಿ ಮಾಡಿದ್ದೆಲ್ಲ ತಪ್ಪು ಎನ್ನಲಾಗದು, Vote Chori ಆರೋಪದಿಂದ ಕಾಂಗ್ರೆಸ್‌ನ ನೈತಿಕತೆ ಕುಸಿತ!