
ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ನಟ ದುನಿಯಾ ವಿಜಯ್ ಹಾಗೂ ನಿರ್ಮಾಪಕ ಸುಂದರ್‌ಗೌಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಗರದ 65ನೇ ಸೆಷನ್ಸ್ ನ್ಯಾಯಾಲಯ ಅಂತಿಮ ಆದೇಶವನ್ನು ಜೂ.8 ರಂದು ಪ್ರಕಟಿಸಲಿದೆ.
ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಜಿ.ಎ. ಮಂಜುನಾಥ ಅರ್ಜಿಯ ಆದೇಶವನ್ನು ಜೂ.8ರಂದು ಪ್ರಕಟಿಸುವುದಾಗಿ ತಿಳಿಸಿದರು. ಅರ್ಜಿ ದಾರರು ಹಾಗೂ ಸರ್ಕಾರದ ಪರ ವಕೀಲರ ವಾದ- ಪ್ರತಿವಾದ ಆಲಿಸಿದ ನ್ಯಾಯಾಧೀಶರು ಆದೇಶ ಕಾಯ್ದಿರಿಸಿದರು.
ಮಾಸ್ತಿಗುಡಿ ಚಿತ್ರದ ಚಿತ್ರೀಕರಣ ವೇಳೆ ಇಬ್ಬರು ಖಳನಟರು ಮೃತಪಟ್ಟ ಪ್ರಕರಣದಲ್ಲಿ ಸುಂದರ್ ಪಿ. ಗೌಡ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಪರಿಣಾಮ ರಾಮನಗರದ ಜೆಎಂಎಫ್‌ಸಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ನೀಡಿ ವಶಕ್ಕೆ ಪಡೆ ಯಲು ತಾವರೆಕೆರೆ ಪೊಲೀಸರು ಸುಂದರ್‌ಗೌಡರ ಮನೆಗೆ ಬಂದಿದ್ದಾಗ ದುನಿಯಾ ವಿಜಯ್ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದರು ಎಂದು ತಾವರೆಕೆರೆ ಠಾಣೆ ಹೆಡ್ ಕಾನ್‌ಸ್ಟೇಬಲ್ ಗೋವಿಂದರಾಜು ಸಲ್ಲಿಸಿದ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.