ದಸರಾ ರಜೆಯಲ್ಲೂ ಮಕ್ಕಳಿಗೆ ಪಾಠ?

Published : Aug 14, 2019, 08:52 AM IST
ದಸರಾ ರಜೆಯಲ್ಲೂ ಮಕ್ಕಳಿಗೆ ಪಾಠ?

ಸಾರಾಂಶ

ಪ್ರವಾಹದಿಂದ ನೀಡಿದ ರಜೆ ಸರಿದೂಗಿಸಿಕೊಳ್ಳಲು ದಸರಾ ರಜೆ ಕಡಿತಗೊಳಿಸಲು ಶಿಕ್ಷಣ ಇಲಾಖೆ ಚಿಂತನೆ | ಪ್ರವಾಹ ಪೀಡಿತ ಪ್ರದೇಶಗಳಲ್ಲಿರುವ ಮಕ್ಕಳು ಯಾವುದೇ ಕಾರಣದಿಂದಲೂ ಪಾಠದಿಂದ ವಂಚಿತರಾಗದಂತೆ ನೋಡಿಕೊಳ್ಳಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಎಂದು  ಶಿಕ್ಷಣ ಇಲಾಖೆ ಹೇಳಿದೆ. 

ಬೆಂಗಳೂರು (ಆ. 14):  ಪ್ರವಾಹದಿಂದ ರಾಜ್ಯದ 17 ಜಿಲ್ಲೆಗಳಲ್ಲಿ ಶಾಲೆಗಳಿಗೆ ನೀಡಿರುವ ರಜೆಯನ್ನು ಸರಿದೂಗಿಸಲು ಮುಂಬರುವ ಸರ್ಕಾರಿ ರಜೆಗಳನ್ನು ಬಳಸಿಕೊಳ್ಳಲಾಗುತ್ತದೆ. ಅಗತ್ಯಬಿದ್ದರೆ ದಸರಾ ರಜೆಯನ್ನು ಕೂಡ ಬಳಸಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

ಸದ್ಯ ಒಂದು ವಾರದಿಂದ ಶಾಲೆಗಳಿಗೆ ರಜೆ ನೀಡಲಾಗಿದೆ. ಇನ್ನೂ ನಿಖರವಾಗಿ ಯಾವಾಗ ಶಾಲೆಗಳು ಪುನಾರಂಭಗೊಳ್ಳಲಿವೆ ಎಂಬುದು ಖಾತ್ರಿಯಾಗಿಲ್ಲ. ಹೀಗಾಗಿ, ಶಾಲೆಗಳು ಆರಂಭವಾದ ನಂತರ ಪ್ರತಿ ಸರ್ಕಾರಿ ರಜೆಯನ್ನು ರದ್ದುಗೊಳಿಸಿ ಶಾಲೆಗಳನ್ನು ನಡೆಸಲಾಗುತ್ತದೆ.

ಸಂತ್ರಸ್ತ ಮಕ್ಕಳಿಗೆ ಎಲ್ಲಾ ಶಾಲೆಗಳಲ್ಲಿ ಪ್ರವೇಶ

ಇಲಾಖೆ ವಾರ್ಷಿಕ ವೇಳಾಪಟ್ಟಿಪ್ರಕಾರ ಸೆಪ್ಟೆಂಬರ್‌ 5ರಿಂದ 20ರ ವರೆಗೆ ದಸರಾ ರಜೆ ನೀಡಲಾಗಿದೆ. ಅಗತ್ಯವೆನಿಸಿದರೆ ರಜೆಯನ್ನು ಬಳಸಿಕೊಳ್ಳಲಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಕೆ.ಜೆ. ಜಗದೀಶ್‌ ಸ್ಪಷ್ಟಪಡಿಸಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿರುವ ಮಕ್ಕಳು ಯಾವುದೇ ಕಾರಣದಿಂದಲೂ ಪಾಠದಿಂದ ವಂಚಿತರಾಗದಂತೆ ನೋಡಿಕೊಳ್ಳಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು. ಸದ್ಯ ರಾಜ್ಯದ ಯಾವುದೇ ಶಾಲೆಗಳಲ್ಲಿಯೂ ಪ್ರವೇಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.

ನೆರೆಯಿಂದ 6 ಲಕ್ಷ ಹೆಕ್ಟೇರ್‌ ಜಮೀನಲ್ಲಿ ಬೆಳೆ ನಾಶ

ಸ್ಥಳೀಯವಾಗಿಯೂ ಕಳೆದು ಹೋಗಿರುವ ಶಾಲಾ ಕಟ್ಟಡ, ಪಠ್ಯಪುಸ್ತಕಗಳನ್ನು ತುರ್ತಾಗಿ ಒದಗಿಸುವ ಕೆಲಸಕ್ಕೆ ಮುಂದಾಗಿದ್ದೇವೆ. ಎಲ್ಲಕ್ಕಿಂತ ಮುಖ್ಯವಾಗಿ ಸಂಪೂರ್ಣ ಪಾಠಗಳನ್ನು ಮಾಡಬೇಕಿದೆ. ಇದಕ್ಕಾಗಿ ಸರ್ಕಾರಿ ರಜೆಗಳನ್ನು ಬಳಸಿಕೊಳ್ಳುವುದು ಅನಿವಾರ್ಯವಾಗಿದೆ. ಈಗ ಎಷ್ಟುದಿನಗಳು ಶಾಲೆ ನಡೆದಿಲ್ಲ ಎಂಬುದರ ಆಧಾರದಲ್ಲಿ ಮುಂದಿನ ರಜೆಗಳನ್ನು ಬಳಸಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ