ಒಕ್ಕಲಿಗರಿಗೆ ನನ್ನ ಪಕ್ಷ ಸ್ಥಾನಮಾನ ನೀಡಿದೆ ಎಂಬರ್ಥದಲ್ಲಿ ಹೇಳಿದ್ದೆ: ಡಿವಿಎಸ್‌ ಸ್ಪಷ್ಷನೆ

Published : Jun 24, 2019, 08:34 AM ISTUpdated : Jun 24, 2019, 09:31 AM IST
ಒಕ್ಕಲಿಗರಿಗೆ ನನ್ನ ಪಕ್ಷ ಸ್ಥಾನಮಾನ ನೀಡಿದೆ ಎಂಬರ್ಥದಲ್ಲಿ ಹೇಳಿದ್ದೆ: ಡಿವಿಎಸ್‌ ಸ್ಪಷ್ಷನೆ

ಸಾರಾಂಶ

ಒಕ್ಕಲಿಗರಿಗೆ ನನ್ನ ಪಕ್ಷ ಸ್ಥಾನಮಾನ ನೀಡಿದೆ ಎಂಬರ್ಥದಲ್ಲಿ ಹೇಳಿದ್ದೆ| ಕೇಂದ್ರ ಸಚಿವ ಸದಾನಂದಗೌಡ ಸ್ಪಷ್ಟನೆ

ಬೆಂಗಳೂರು[ಜೂ.24]: ಗೌಡ ಎಂಬ ಪದದಿಂದ ನಾನು ಮುಖ್ಯಮಂತ್ರಿ, ಕೇಂದ್ರ ಸಚಿವನಾದೆ ಎಂಬ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರು ಸ್ಪಷ್ಟನೆ ನೀಡಿದ್ದಾರೆ.

ನನ್ನ ಪಕ್ಷ ನನ್ನ ಹೆತ್ತ ತಾಯಿ ಸಮಾನ. ಕುಗ್ರಾಮ ಮಂಡೆಕೋಲಿನಿಂದ ಬಂದ ಈ ಹುಡುಗನಿಗೆ ಪಕ್ಷ ಎಲ್ಲವನ್ನೂ ಕೊಟ್ಟಿದೆ. ನನ್ನ ಪಕ್ಷ ಒಕ್ಕಲಿಗ ಸಮಾಜಕ್ಕೆ ಉತ್ತಮ ಸ್ಥಾನಮಾನ ಪ್ರಾತಿನಿಧಿತ್ವವನ್ನು ನನ್ನ ಮೂಲಕ ಕೊಟ್ಟಿದೆ ಎನ್ನುವ ಮಾತನ್ನು ನಾನು ಹೆಮ್ಮೆಯಿಂದ ಹೇಳಿಕೊಂಡದ್ದನ್ನು ಬೇರೆ ರೀತಿ ಅರ್ಥೈಸಲಾಗಿದೆ ಎಂದಿದ್ದಾರೆ.
ನನ್ನ ಹೆಸರಲ್ಲಿ ಗೌಡ ಇದ್ದ ಕಾರಣ ಸಿಎಂ, ಕೇಂದ್ರ ಸಚಿವ ಆದೆ: ಡಿವಿಎಸ್‌

ಇಷ್ಟೇ ಅಲ್ಲದೇ ಚುನಾವಣೆಗಳನ್ನು ಗೆಲ್ಲಲು ಜಾತ್ಯತೀತವಾಗಿ, ಪಕ್ಷಾತೀತವಾಗಿ ನನ್ನನ್ನು ಜನರು ಆಯ್ಕೆ ಮಾಡಲು ನನ್ನ ಪಕ್ಷ ಮತ್ತು ಮೋದಿ ಅವರ ನಾಯಕತ್ವವೇ ಕಾರಣ. ಮುಂದೆ ಜನ ನಮ್ಮನ್ನು ಗುರುತಿಸುವುದು, ಗೌರವಿಸುವುದು ಮೋದಿ ಅವರ ನೇತೃತ್ವದಲ್ಲಿ ನಾವು ಮಾಡುವ ಕೆಲಸದಿಂದ ಎಂದು ಟ್ವೀಟ್‌ ಮೂಲಕ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಸು ಧ್ವನಿಯಲ್ಲಿ ಮಾತಾಡಿದ್ದರು ಎನ್ನುವ ಆರೋಪ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
Vande Mataram ಎರಡು ಪದಗಳ ಅರ್ಥ ವಿವರಿಸಿದ ಇಕ್ರಾ ಹಸನ್: ಸಂಸದೆಯ ಮಾತು ವೈರಲ್