
ನವದೆಹಲಿ, (ಮೇ.31): ರೈತರಿಗೆ ಇನ್ನೂ ಕಡಿಮೆ ದರದಲ್ಲಿ ರಸಗೊಬ್ಬರ ಪೂರೈಕೆ ಮಾಡಬೇಕಾದದ ಜವಾಬ್ದಾರಿ ನನ್ನ ಮೇಲಿದೆ. 2022ಕ್ಕೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಗುರಿಯನ್ನು ಇಟ್ಟುಕೊಂಡಿರುವ ಹಿನ್ನೆಲೆಯಲ್ಲಿ ಕೃಷಿ ಉತ್ಪಾದನಾ ವೆಚ್ಚ ಇಳಿಕೆ ಆಗಬೇಕಿದೆ ಎಂದು ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.
ರಸಗೊಬ್ಬರದ ದರ ಇಳಿಕೆ ಮಾಡಬೇಕಿದ್ದು, ರಸಗೊಬ್ಬರದ ಆಮದು ಕಡಿಮೆ ಮಾಡಿ ದೇಶದಲ್ಲೇ ಉತ್ಪಾದನೆ ಮಾಡುವುದಕ್ಕೆ ಒತ್ತು ನೀಡಲಾಗುವುದು. ಎಂದು ತಿಳಿಸಿದರು.
ಮುಚ್ಚಿರುವ ರಸಗೊಬ್ಬರ ಕಾರ್ಖಾನೆಗಳ ಪುನಶ್ಚೇತನ, ಬೇವು ಲೇಪಿತ ಯೂರಿಯಾದ ಮೂಲಕ ಯೂರಿಯಾದ ದುರುಪಯೋಗ ತಡೆಯುವ ನಿಟ್ಟಿನಲ್ಲಿ ಅನಂತ್ ಕುಮಾರ್ ಶ್ರಮಿಸಿದ್ದರು ಇದೆ ದಿಟ್ಟ ಹೆಜ್ಜೆಯನ್ನು ಮುಂದುವರಿಸುತ್ತೇನೆ ವಿಶ್ವಾಸ ವ್ಯಕ್ತಪಡಿಸಿದರು.
ಶೇ. 23.30ರಷ್ಟು ಯೂರಿಯಾ ಕೊರತೆಯಿದ್ದು. ಅದನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇನೆ ಎಂದರು.
ಕಳೆದ ಮೋದಿ ಸಂಪುಟದಲ್ಲಿ ದಿವಂಗತ ಅನಂತ್ ಕುಮಾರ್ ಅವರು ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾಗಿದ್ದರು. ಇದೀಗ ಈ ಖಾತೆಯನ್ನು ಸದಾನಂದಗೌಡ ಅವರಿಗೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.