
ಹಾವೇರಿ[ಸೆ.06]: ಜಾರಿ ನಿರ್ದೇಶನಾಲಯ (ಇ.ಡಿ)ದ ಅಧಿಕಾರಿಗಳ ವಿಚಾರಣೆ ವೇಳೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಸರಿಯಾಗಿ ಉತ್ತರಿಸಿದ್ದರೆ ಅವರ ಬಂಧನವಾಗುತ್ತಿರಲಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೊಮ್ಮಾಯಿ ಯಾವಾಗ ಲಾಯರ್ ಆಗಿದ್ದರು?: ಸಿದ್ದರಾಮಯ್ಯ ತಿರುಗೇಟು!
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅಕ್ರಮಕ್ಕೆ ಸಂಬಂಧಿಸಿ ಹೆಚ್ಚಿನ ಮಾಹಿತಿ ಕಲೆಹಾಕಲು ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಲಾಗಿದೆ. ಈ ವಿಚಾರ ನ್ಯಾಯಾಲಯದಲ್ಲಿದೆ. ಅಧಿಕಾರಿಗಳು ಕಾನೂನು ಪ್ರಕಾರ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಗೂ ಡಿ.ಕೆ.ಶಿವಕುಮಾರ್ ಬಂಧನಕ್ಕೂ ಯಾವುದೇ ಸಂಬಂಧ ಇಲ್ಲ ಎಂದರು.
ED ಕುಣಿಕೆಯಲ್ಲಿ ಡಿಕೆಶಿ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಡಿ.ಕೆ. ಶಿವಕುಮಾರ್ ಬಂಧನದ ಬಳಿಕ ರಾಮನಗರ ಹಾಗೂ ಕನಕಪುರಗಳಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಮಾಡುತ್ತಿದ್ದಾರೆ. ಅಲ್ಲಿನ ಕೆಲ ಪ್ರತಿಭಟನಾಕಾರರು ಕಾನೂನು ಕೈಗೆತ್ತಿಕೊಂಡಿದ್ದಾರೆ. ಕನಕಪುರ ಮತ್ತು ರಾಮನಗರಗಳಲ್ಲಿ ಶಾಂತಿ ಸಭೆ ಮಾಡಲಾಗುತ್ತಿದೆ. ಈಗಾಗಲೇ ಪೊಲೀಸ್ ಇಲಾಖೆ ಹೆಚ್ಚಿನ ನಿಗಾ ವಹಿಸಿದ್ದು, ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.