ವಿವಾದಾತ್ಮಕ ಹೇಳಿಕೆ: ಸಾಕ್ಷಿ ಮಹರಾಜ್’ಗೆ ಚುನಾವಣಾ ಆಯೋಗ ಛೀಮಾರಿ

Published : Jan 12, 2017, 03:25 PM ISTUpdated : Apr 11, 2018, 12:41 PM IST
ವಿವಾದಾತ್ಮಕ ಹೇಳಿಕೆ: ಸಾಕ್ಷಿ ಮಹರಾಜ್’ಗೆ ಚುನಾವಣಾ ಆಯೋಗ ಛೀಮಾರಿ

ಸಾರಾಂಶ

ಇನ್ನೊಮ್ಮೆ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗವು ಉತ್ತರಪ್ರದೇಶದ ಬಿಜೆಪಿ ನಾಯಕನನ್ನು ಎಚ್ಚರಿಸಿದೆ.

ನವದೆಹಲಿ (ಜ.12): ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ಹೆಚ್ಚಳಕ್ಕೆ ಮುಸ್ಲಿಮರನ್ನು ಪರೋಕ್ಷವಾಗಿ ದೂಷಿಸಿದ ಬಿಜೆಪಿ ಸಂಸದ ಸಾಕ್ಷಿ ಮಹರಾಜ್’ಗೆ ಚುನಾವಣಾ ಅಯೋಗವು ಛೀಮಾರಿ ಹಾಕಿದೆ.

ಇನ್ನೊಮ್ಮೆ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗವು ಉತ್ತರಪ್ರದೇಶದ ಬಿಜೆಪಿ ನಾಯಕನನ್ನು ಎಚ್ಚರಿಸಿದೆ.

ತನ್ನ ವಿವಾದಾತ್ಮಕ ಹೇಳಿಕೆಗೆ ಸಾಕ್ಷಿ ಮಹರಾಜ್ ನೀಡಿರುವ ಸ್ಪಷ್ಟೀಕರಣವು ಒಪ್ಪುವಂತಹದಲ್ಲವೆಂದು ಚುನಾವಣಾ ಆಯೋಗ ಹೇಳಿದೆ.

ತಾನು ಹೇಳಿಕೆ ನೀಡಿರುವುದು ಸಾಧು-ಸಂತರ ಸಮಾವೇಶದಲ್ಲೇ ಹೊರತು ಸಾರ್ವಜನಿಕ ಸ್ಥಳದಲ್ಲಿ ಅಲ್ಲವೆಂದೂ, ಅದರಿಂದ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗುವುದಿಲ್ಲವೆಂದು ಸಾಕ್ಷಿ ಮಹರಾಜ್ ವಾದಿಸಿದ್ದರು.

ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಹಾಗೂ ಮಣಿಪುರ ರಾಜ್ಯಗಳಲ್ಲಿ ಫೆಬ್ರವರಿ ತಿಂಗಳಿನಲ್ಲಿ  ವಿಧಾನಸಭೆಗೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಜ.4ರಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!