
ನಾಗಪುರ: ಮೋದಿ ಸರ್ಕಾರದ ಆರ್ಥಿಕ ನೀತಿಗಳ ಬಗ್ಗೆ ಟೀಕೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಆರ್ಥಿಕ ನೀತಿಗಳ ಪುನರ್-ವಿಮರ್ಶೆಯಾಗಬೇಕೆಂದು ಕೇಂದ್ರಕ್ಕೆ ಕರೆಯಿತ್ತಿದ್ದಾರೆ.
ನಾಗಪುರದಲ್ಲಿ ವಿಜಯದಶಮಿ ಭಾಷಣ ಮಾಡಿದ ಭಾಗವತ್, ಕೇಂದ್ರವು ಆರ್ಥಿಕ ನೀತಿಯಲ್ಲಿ ಸುಧಾರಣೆ ತರಬೇಕು; ಆರ್ಥಿಕ ಸಲಹೆಗಾರರು ಹಳೆಯ ‘ಆರ್ಥಿಕವಾದ’ಗಳಿಂದ ಹೊರಬಂದು, ದೇಶದ ಪ್ರಸಕ್ತ ವಾಸ್ತವಿಕತೆಗಳನ್ನು ಗಮನದಲ್ಲಿಟ್ಟುಕೊಂಡು ಪರಿಹಾರಗಳನ್ನು ಮುಂದಿಡುವಂತೆ ಕರೆ ನೀಡಿದ್ದಾರೆ.
ಎಲ್ಲಾ ವರ್ಗದ ವ್ಯಾಪಾರ ವಹಿವಾಟು, ಉದ್ದಿಮೆ ಹಾಗೂ ರೈತರ ಹಿತವನ್ನು ಕಾಪಾಡುವ ಆರ್ಥಿಕ ನೀತಿಯ ಅಗತ್ಯವಿದೆ. ಈ ಕ್ಷೇತ್ರಗಳಲ್ಲಿ ಆರ್ಥಿಕ ಸ್ಥಿರತೆಯನ್ನು ಖಚಿತಪಡಿಸಿಕೊಂಡು ಆರ್ಥಿಕ ಸುಧಾರಣೆಗಳನ್ನು ಕೈಗೊಳ್ಳಬೇಕು, ಎಂದು ಭಾಗವತ್ ಅಭಿಪ್ರಾಯಪಟ್ಟಿದ್ದಾರೆ.
ಆರ್ಥಿಕ ನೀತಿಗಳ ಪುನರ್-ವಿಮರ್ಶೆ ನಡೆಯಬೇಕು, ಜತೆಗೆ ಉದ್ಯೋಗ ಸೃಷ್ಟಿಯೂ ಆಗಬೇಕು. ಸರ್ಕಾರವು ಜನರಲ್ಲಿ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಿ, ಅದಕ್ಕೆ ಅಗತ್ಯವಿರುವ ಬೆಂಬಲವನ್ನು ಒದಗಿಸಬೇಕೆಂದು, ಭಾಗವತ್ ಕರೆ ನೀಡಿದ್ದಾರೆ.
ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ ಅವರು ಮೋದಿ ಸರ್ಕಾರದ ಆರ್ಥಿಕ ನೀತಿಯನ್ನು ಕಟುವಾಗಿ ಟೀಕಿಸಿರುವುದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.