
ನವದೆಹಲಿ[ಸೆ. 04] ‘ಡಿಕೆ ಶಿವಕುಮಾರ್ ಅವರ ಬಂಧನ ದ್ವೇಷದ ರಾಜಕಾರಣಕ್ಕೆ ಒಂದು ಅತ್ಯುತ್ತಮ ಉದಾಹರಣೆ. ಇಡಿ ಮತ್ತು ಸಿಬಿಐನಂತಹ ಸಂಸ್ಥೆಗಳನ್ನು ಬಳಸಿಕೊಂಡು ಕೇಂದ್ರ ಸರ್ಕಾರ ವೈಯಕ್ತಿಕವಾಗಿ ದ್ವೇಷ ಸಾಧಿಸುತ್ತಿದೆ’
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ರೀತಿ ಟ್ವೀಟ್ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ಆಸ್ಪತ್ರೆಯಲ್ಲಿರುವ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಪ್ರಯತ್ನ ಮಾಡಿದರೂ ಅದು ಸಾಧ್ಯವಾಗಲಿಲ್ಲ.
DKS ಬಂಧನ, ಕನಕಪುರ ಕಂಪನ; ಬಾಲಿವುಡ್‌ನತ್ತ ಮಂದಣ್ಣ: ಇಲ್ಲಿವೆ ಸೆ.04ರ ಟಾಪ್ 10 ಸುದ್ದಿ!
ಡಿಕೆ ಶಿವಕುಮಾರ್ ಅವರನ್ನು ನಾಲ್ಕು ದಿನಗಳಿಂದ ವಿಚಾರಣೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ ಮಂಗಳವಾರ ರಾತ್ರಿ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂಬ ಆರೋಪದ ಮೇಲೆ ಅವರನ್ನು ಬಂಧಿಸಿತ್ತು. ಇದಾದ ಮೇಲೆ ಸಹಜವಾಗಿಯೇ ಕರ್ನಾಟಕದ ಕಾಂಗ್ರೆಸ ನಾಯಕರು ಕೇಂದ್ರ ಸರ್ಕಾರದ ಮೇಲೆ ಆಕ್ರೋಶ ಹೊರ ಹಾಕಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.