ರಾಜ್ಯದ ವಿವಿಗಳಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ ಎಂದು ಒಪ್ಪಿಕೊಂಡ ಶಿಕ್ಷಣ ಸಚಿವ!

Published : May 03, 2017, 04:42 PM ISTUpdated : Apr 11, 2018, 01:12 PM IST
ರಾಜ್ಯದ  ವಿವಿಗಳಲ್ಲಿ  ಭ್ರಷ್ಟಾಚಾರ  ವ್ಯಾಪಕವಾಗಿ ನಡೆಯುತ್ತಿದೆ ಎಂದು ಒಪ್ಪಿಕೊಂಡ ಶಿಕ್ಷಣ ಸಚಿವ!

ಸಾರಾಂಶ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ ಎಂದು ಖುದ್ದು ಉನ್ನತ ಶಿಕ್ಷಣ ಸಚಿವರೇ ಒಪ್ಪಿಕೊಂಡಿದ್ದಾರೆ. ರಾಜ್ಯದ ವಿವಿಗಳಲ್ಲಿನ ಕುಲಪತಿಗಳೆಲ್ಲ ಭ್ರಷ್ಟರಾಗಿದ್ದಾರೆ. ಇದನ್ನು ಸರಿಪಡಿಸಲು ಅನಿವಾರ್ಯವಾಗಿ ವಿವಿ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹೇಳಿದ್ದಾರೆ.

ನವದೆಹಲಿ (ಮೇ.03): ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ ಎಂದು ಖುದ್ದು ಉನ್ನತ ಶಿಕ್ಷಣ ಸಚಿವರೇ ಒಪ್ಪಿಕೊಂಡಿದ್ದಾರೆ. ರಾಜ್ಯದ ವಿವಿಗಳಲ್ಲಿನ ಕುಲಪತಿಗಳೆಲ್ಲ ಭ್ರಷ್ಟರಾಗಿದ್ದಾರೆ. ಇದನ್ನು ಸರಿಪಡಿಸಲು ಅನಿವಾರ್ಯವಾಗಿ ವಿವಿ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹೇಳಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕಾಯ್ದೆಗೆ ಅಂಕಿತ ಹಾಕಲು ರಾಜ್ಯಪಾಲರು ನಿರಾಕರಿಸಿರುವ ಮಾಹಿತಿ ಸಿಕ್ಕಿದ್ದು ನಾವು ಅವರನ್ನು ಭೇಟಿಯಾಗಿ ಕಾಯ್ದೆಯ ಅಗತ್ಯ ಮತ್ತು ಮಹತ್ವವನ್ನು ಮನವರಿಕೆ ಮಾಡಿಕೊಡಲಿದ್ದೇವೆ. ಕೆಲ ಕುಲಪತಿಗಳು ರಾಜ್ಯಪಾಲರನ್ನು ತಪ್ಪು ದಾರಿಗೆಳೆದಿರಬೇಕು. ಆದರೆ ರಾಜ್ಯಪಾಲರು ಅತ್ಯಂತ ಪ್ರಾಮಾಣಿಕರಾಗಿದ್ದು, ಕಾಯ್ದೆಗೆ ಒಪ್ಪಿಗೆ ಸೂಚಿಸುವ ವಿಶ್ವಾಸವಿದೆ ಎಂದು ರಾಯರಡ್ಡಿ ತಿಳಿಸಿದರು.

ರಾಜ್ಯದ ವಿವಿಗಳಲ್ಲಿ ಅವ್ಯಾಹತವಾಗಿ ಭ್ರಷ್ಟಾಚಾರ ನಡೆಯುತ್ತಿದೆ. ಒಂದು ದೊಡ್ಡ ಸೆಗಣಿ, ಇನ್ನೊಂದು ಸಣ್ಣ ಸೆಗಣಿ. ಆದರೆ ವಾಸನೆ ಎಲ್ಲ ಒಂದೇ. ಇದನ್ನು ಸರಿಪಡಿಸಲು ಶ್ರಮಿಸುತ್ತಿದ್ದೇನೆ. ವಿವಿಗಳ ರಿಜಿಸ್ಟ್ರಾರ್ ಹುದ್ದೆ ಆಡಳಿತಾತ್ಮಕ ಹುದ್ದೆಯಾಗಿದ್ದು ಇದಕ್ಕೆ ಐಎಎಸ್ ಅಧಿಕಾರಿಗಳನ್ನು ನೇಮಿಸಬೇಕು. ಕುಲಪತಿಗಳ ನೇಮಕ ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿ ನಡೆಯಬೇಕು ಎಂದು ರಾಯರಡ್ಡಿ ಅಭಿಪ್ರಾಯಪಟ್ಟರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ