ಶಿಕ್ಷಣ ಸಿಬ್ಬಂದಿಗೆ ಕಿರುಕುಳ: ಕ್ರಮಕ್ಕೆ ಸಚಿವರ ಆದೇಶ

Published : Sep 09, 2019, 08:09 AM IST
ಶಿಕ್ಷಣ ಸಿಬ್ಬಂದಿಗೆ ಕಿರುಕುಳ: ಕ್ರಮಕ್ಕೆ ಸಚಿವರ ಆದೇಶ

ಸಾರಾಂಶ

ಶಿಕ್ಷಣ ಇಲಾಖೆಯಲ್ಲಿ ಕಿರಕುಳದ ಬಗ್ಗೆ ದೂರುಗಳು ಬರುತ್ತಿದ್ದು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ನೀಡಿದ್ದಾರೆ. 

ಬೆಂಗಳೂರು [ಸೆ.09] :  ಶಿಕ್ಷಣ ಇಲಾಖೆಯ ಕೆಲವು ಅಧಿಕಾರಿಗಳು ತಮ್ಮ ಅಧೀನ ಸಿಬ್ಬಂದಿ ಹಾಗೂ ಶಿಕ್ಷಕರಿಗೆ ಕಿರುಕುಳ ನೀಡುತ್ತಿರುವ ಹಾಗೂ ದಬ್ಬಾಳಿಕೆ ನಡೆಸುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಸರ್ವಶಿಕ್ಷಾ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ಯಾರಿಗೇ ಆಗಲಿ ಅಧಿಕಾರ ಇರುವುದು ಸಮುದಾಯಕ್ಕೆ ತನ್ನದೇ ಆದ ರೀತಿಯಲ್ಲಿ ಸಹಾಯ, ಸಹಕಾರ ನೀಡಿ ರಾಷ್ಟ್ರನಿರ್ಮಾಣಕ್ಕೆ ಶ್ರಮಿಸಲು. ಆದರೆ, ಇಲಾಖೆಯ ಅಭಿವೃದ್ಧಿಗೆ ಪೂರಕವಾಗಿ ಬಳಸಿಕೊಳ್ಳಬೇಕಾದ ಅಧಿಕಾರವನ್ನು ಸಿಬ್ಬಂದಿ, ಶಿಕ್ಷಕರ ಮೇಲೆ ಅಧಿಕಾರಿಗಳು ದಬ್ಬಾಳಿಕೆ ನಡೆಸಲು ಬಳಸಿಕೊಳ್ಳುವುದು ಸರ್ವಥಾ ಸಲ್ಲ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ತಾವು ರಾಜ್ಯದ ವಿವಿಧೆಡೆ ಪ್ರವಾಸ ಮಾಡಿದ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿ ಹಾಗೂ ಶಿಕ್ಷಕರಿಂದ ಇಂತಹ ಆರೋಪಗಳು, ದೂರುಗಳು ಕೇಳಿಬಂದಿವೆ. ಇಂತಹ ತಪ್ಪುಗಳು ಮರುಕಳಿಸದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಹಾಗೂ ದೂರುಗಳು ಮುಂದಿನ ದಿನಗಳಲ್ಲಿ ಬಾರದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರು ಯೋಜನಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ನಮ್ಮನ್ನೇಕೆ ವೈರಿಗಳಂತೆ ನೋಡುತ್ತೀರಿ? ನಾವು ಸಹೋದ್ಯೋಗಿಗಳು: ಡಿಸಿಎಂ ಡಿಕೆ ಶಿವಕುಮಾರ್