ಮತದಾರರಿಗೆ ಲಂಚ ಗಂಭೀರ ಸ್ವರೂಪದ ಅಪರಾಧವಾಗಬೇಕು: ಮುಖ್ಯ ಚುನಾವಣಾ ಆಯುಕ್ತ

Published : Mar 10, 2017, 12:37 PM ISTUpdated : Apr 11, 2018, 01:02 PM IST
ಮತದಾರರಿಗೆ ಲಂಚ ಗಂಭೀರ ಸ್ವರೂಪದ ಅಪರಾಧವಾಗಬೇಕು: ಮುಖ್ಯ ಚುನಾವಣಾ ಆಯುಕ್ತ

ಸಾರಾಂಶ

ಪಂಚರಾಜ್ಯಗಳ ವಿಧಾನಸಭೆಗಳಿಗೆ ಮತದಾನಗಳು ಮುಕ್ತಾಯವಾದ ಬಳಿಕ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ನಸೀಮ್ ಝೈದಿ, ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಲಂಚ ಕೊಡುವುದನ್ನು ಶಿಕ್ಷಾರ್ಹ ಅಪರಾಧವಾಗಿ ಮಾಡಲು ಆಯೋಗವು ಪ್ರಯತ್ನಿಸುತ್ತಿದೆಯೆಂದಿದ್ದಾರೆ.

ನವದೆಹಲಿ (ಮಾ.10): ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಮತದಾರರಿಗೆ ಲಂಚ ಕೊಡುವುದನ್ನು ತಡೆಯಲು, ಅಂತಹ ಕೃತ್ಯಗಳನ್ನು ಗಂಭೀರ ಸ್ವರೂಪದ ಅಪರಾಧವಾಗಿ (Cognizable Offence) ಪರಿಗಣಿಸಲು ಚುನಾವಣಾ ಆಯೋಗ ಚಿಂತನೆ ನಡೆಸಿದೆ.

ಪಂಚರಾಜ್ಯಗಳ ವಿಧಾನಸಭೆಗಳಿಗೆ ಮತದಾನಗಳು ಮುಕ್ತಾಯವಾದ ಬಳಿಕ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ನಸೀಮ್ ಝೈದಿ, ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಲಂಚ ಕೊಡುವುದನ್ನು ಶಿಕ್ಷಾರ್ಹ ಅಪರಾಧವಾಗಿ ಮಾಡಲು ಆಯೋಗವು ಪ್ರಯತ್ನಿಸುತ್ತಿದೆಯೆಂದಿದ್ದಾರೆ.

ಬದಲಾಗುತ್ತಿರುವ ರಾಜಕೀಯ ಸನ್ನಿವೇಶಗಳ ಹಿನ್ನೆಲೆ ಹಾಗೂ ಚುನಾವಣಾ ಸಂದರ್ಭದಲ್ಲಿ ನಡೆಯುವ ಅವ್ಯವಹಾರಗಳನ್ನು ತಡೆಯಲು ಹೊಸ ಕಾನೂನಿನ ಅಗತ್ಯವಿದಯೆಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ರಾಜಕೀಯ ಪಕ್ಷಗಳಲ್ಲಿ ಆಂತರಿಕ ಸುಧಾರಣೆ ಹಾಗೂ ದೇಣಿಗೆ ಸಂಗ್ರಹ ಕುರಿತು ಚರ್ಚೆಯಾಗಬೇಕೆಂದು ಅವರು  ಸಂದರ್ಭದಲ್ಲಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಮೊದಲ ಹೈಡ್ರೋಜನ್‌ ಚಾಲಿತ ವಾಟರ್‌ ಟ್ಯಾಕ್ಸಿ ವಾರಾಣಸಿಯಲ್ಲಿ ಶುರು
ಎಐ ನಿರ್ಮಾತೃಗಳಿಗೆ 2025ರ ಟೈಮ್ ವರ್ಷದ ವ್ಯಕ್ತಿ ಗೌರವ!