
ಬೆಂಗಳೂರು, (ಅ.6): ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ಇಂದು(ಅ.06) ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ.
ಇದರಲ್ಲಿ ಕರ್ನಾಟಕದ ಎರಡು ವಿಧಾನಸಭಾ ಉಪಚುನಾವಣೆಗೂ ದಿನಾಂಕ ಘೋಷಿಸಲಾಗಿದ್ದು, ರಾಮನಗರ ಹಾಗೂ ಜಮಖಂಡಿ ವಿಧಾನಸಭೆ ಉಪಚುನಾವಣೆ ನವೆಂಬರ್ 3ರಂದು ಚುನಾವಣೆ ನಡೆಯಲಿದೆ.
ರಾಮನಗರ ಉಪಚುನಾವಣೆ: ಬಿಜೆಪಿಯಿಂದ ಮಾಜಿ ಸಿಎಂ ಪುತ್ರಿ ಕಣಕ್ಕೆ..?
ಇನ್ನು ಇದರ ಫಲಿತಾಂಶ ನವೆಂಬರ್ 6ಕ್ಕೆ ಹೊರಬೀಳಲಿದೆ. ಇಂದಿನಿಂದಲೇ ನೀತಿ ಸಂಹಿತಿ ಜಾರಿಗೆ ಬರಲಿದೆ ಎಂದು ಕೇಂದ್ರ ಚುನಾವಣೆ ಆಯೋಗ ತಿಳಿಸಿದೆ.
ಸಿಎಂ ಕುಮಾರಸ್ವಾಮಿ ಅವರು ಚನ್ನಪಟ್ಟಣ ಹಾಗೂ ರಾಮನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಎರಡೂ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಆದರೆ, ಕುಮಾರಸ್ವಾಮಿ ಅವರು ಚನ್ನಪಟ್ಟಣವನ್ನು ಇಟ್ಟುಕೊಂಡು ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು.
ಇದ್ರಿಂದ ರಾಮನಗರಕ್ಕೆ ನವೆಂಬರ್ 3 ರಂದು ಚುನಾವಣೆ ನಡೆಯಲಿದೆ. ಇನ್ನು ಕಾಂಗ್ರೆಸ್ ನ ಸಿದ್ದು ನ್ಯಾಮೇಗೌಡ ಅವರ ಅಕಾಲಿಕ ಮರಣದಿಂದ ಜಮಖಂಡಿ ವಿಧಾಸಭೆ ತೆರವಾಗುತ್ತು. ಹಿನ್ನೆಲೆಯಲ್ಲಿ ನವೆಂಬರ್ 3ರಂದು ಉಪಚುನಾವಣೆ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.