
ನವದೆಹಲಿ (ಮಾ. 05): ಮುಂಬರುವ 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪರಿಸರಕ್ಕೆ ಹಾನಿಯನ್ನುಂಟು ಮಾಡುವ ಪ್ಲಾಸ್ಟಿಕ್‌ನಿಂದ ಸಿದ್ಧಪಡಿಸಲಾಗುವ ಯಾವುದೇ ವಸ್ತುಗಳನ್ನು ರಾಜಕೀಯ ಪ್ರಚಾರಕ್ಕೆ ಬಳಕೆ ಮಾಡಿಕೊಳ್ಳದಂತೆ ನಿಷೇಧ ಹೇರುವ ಪ್ರಸ್ತಾವನೆ ಬಗ್ಗೆ ಪರಿಶೀಲಿಸುವಂತೆ ಕೇಂದ್ರ ಚುನಾವಣಾ ಆಯೋಗ, ಕೇಂದ್ರ ಸರ್ಕಾರ ಹಾಗೂ ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಸೂಚಿಸಿದೆ.
ಮೋದಿಗೆ ಮುಸ್ಲಿಂ ಮತ ಬೇಕಿಲ್ಲ, ನಮಗೇ ಹಾಕಿ: ಜಮೀರ್ ಅಹ್ಮದ್ ಕರೆ
ಈ ಬಗ್ಗೆ ಸೋಮವಾರ ವಿಚಾರಣೆ ನಡೆಸಿದ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಮುಖ್ಯಸ್ಥ ನ್ಯಾ. ಆದರ್ಶ ಕುಮಾರ್ ಗೋಯೆಲ್ ಅವರು, ‘ಮುಂಬರುವ ಲೋಕಸಭಾ ಚುನಾವಣೆ ವೇಳೆ ಪ್ಲಾಸ್ಟಿಕ್‌ನಿಂದ ತಯಾರಿಸಲಾದ ಯಾವುದೇ ವಸ್ತುಗಳನ್ನು ಚುನಾವಣಾ ಪ್ರಚಾರ ಪರಿಕರಗಳಾಗಿ ಬಳಸಲು ನಿಷೇಧ ಹೇರುವ ಕುರಿತು ಚುನಾವಣಾ ಆಯೋಗ, ಪರಿಸರ ಸಚಿವಾಲಯ, ಅರಣ್ಯ ಮತ್ತು ಹವಾಮಾನ ಬದಲಾವಣೆ ಹಾಗೂ ಕೇಂದ್ರೀಯ ಮಾಲಿನ್ಯ ತಡೆ ಮಂಡಳಿ ಒಂದು ವಾರದೊಳಗೆ ಸಭೆ ಸೇರಿ ನಿರ್ಧರಿಸಬೇಕು ಎಂದು ಸೂಚಿಸಿದರು.
ರಫೇಲ್ ಡೀಲ್: ವಿಪಕ್ಷಗಳ ಟೀಕೆಗೆ ಮೋದಿ ಸಿಡಿಮಿಡಿ!
ಪಿವಿಸಿ, ಸಿಂಥೆಟಿಕ್ ಪ್ಲಾಸ್ಟಿಕ್ ಹಾಗೂ ಕ್ಲೋರಿನೇಟೆಡ್ ಪ್ಲಾಸ್ಟಿಕ್ ಸೇರಿದಂತೆ ಯಾವುದೇ ರೀತಿಯ ಪ್ಲಾಸ್ಟಿಕ್ ಬ್ಯಾನರ್‌ಗಳು, ಹೋರ್ಡಿಂಗ್ಸ್‌ಗಳನ್ನು ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರಕ್ಕೆ ಬಳಸದಂತೆ ನಿಷೇಧ ಹೇರಬೇಕು ಎಂದು ಕೋರಿ ಅರ್ಜಿಯೊಂದು ಸಲ್ಲಿಕೆಯಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.