ಮಾರ್ಚ್ 2 ನೇ ವಾರದೊಳಗೆ ಚುನಾವಣಾ ದಿನಾಂಕ ಪ್ರಕಟ?

By Suvarna Web DeskFirst Published Jan 31, 2018, 8:29 AM IST
Highlights

ವಿಧಾನಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಕೇಂದ್ರ ಚುನಾವಣಾ ಆಯೋಗವು ಮಾರ್ಚ್ ತಿಂಗಳ ಮೊದಲ ಅಥವಾ 2 ನೇ ವಾರದಲ್ಲಿ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲು ಚಿಂತನೆ ನಡೆಸಿದೆ.

ಬೆಂಗಳೂರು (ಜ.31): ವಿಧಾನಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಕೇಂದ್ರ ಚುನಾವಣಾ ಆಯೋಗವು ಮಾರ್ಚ್ ತಿಂಗಳ ಮೊದಲ ಅಥವಾ 2 ನೇ ವಾರದಲ್ಲಿ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲು ಚಿಂತನೆ ನಡೆಸಿದೆ.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿದ್ಧತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರತವಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಮತದಾರರ ಪಟ್ಟಿ  ಪರಿಷ್ಕರಣೆ ವಿವರ ಸಂಗ್ರಹ ಮಾಡುವಲ್ಲಿ ಆಯೋಗದ ಸಿಬ್ಬಂದಿ ನಿರತವಾಗಿದ್ದಾರೆ. ಫೆ.28 ಕ್ಕೆ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ಕೊನೆಯಾಗಲಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಮುಗಿಯುವವರೆಗೆ ಚುನಾವಣಾ ದಿನಾಂಕ ಪ್ರಕಟಿಸುವುದಿಲ್ಲ ಎಂದು ಚುನಾವಣಾ ಆಯೋಗದ ಮೂಲಗಳು ಸ್ಪಷ್ಟಪಡಿಸಿವೆ.

ಫೆ. 28 ಕ್ಕೆ ಮತದಾರರ ಪಟ್ಟಿ ಪರಿಷ್ಕರಣೆ ಕೆಲಸ ಮುಗಿದ ತರುವಾಯವಷ್ಟೇ  ಚುನಾವಣೆ ದಿನಾಂಕ ಘೋಷಣೆ ಮಾಡಲಾಗುತ್ತದೆ. ರಾಜ್ಯದಲ್ಲಿನ ಚುನಾವಣಾ ಕಾರ್ಯಗಳ ಕುರಿತು ಸಿದ್ಧತೆ ಸೇರಿದಂತೆ ಎಲ್ಲಾ ಆಯಾಮದ ಮಾಹಿತಿಗಳನ್ನು ಕೇಂದ್ರ ಚುನಾವಣಾ ಆಯೋಗವು ಪಡೆದುಕೊಳ್ಳಲಿದೆ.

ಹೀಗಾಗಿ ಮಾರ್ಚ್ ತಿಂಗಳ ಮೊದಲ ಅಥವಾ ಎರಡನೇ ವಾರದಲ್ಲಿ ಘೋಷಣೆಯಾಗುವ ಸಾಧ್ಯತೆಗಳಿವೆ. ಮತದಾರರ ಪಟ್ಟಿ ಪರಿಷ್ಕರಣೆಯ ವಿವರವನ್ನು ಎಲ್ಲಾ ಜಿಲ್ಲೆಗಳಿಂದ ಕ್ರೋಢೀಕರಿಸಲಾಗುತ್ತಿದೆ.

 

click me!