ಗೆದ್ದರೆ ಅಧಿಕಾರ, ಇಲ್ಲದಿದ್ದರೆ ವಿಪಕ್ಷ : ದೇವೇಗೌಡ

Published : Dec 09, 2017, 09:57 AM ISTUpdated : Apr 11, 2018, 12:53 PM IST
ಗೆದ್ದರೆ ಅಧಿಕಾರ, ಇಲ್ಲದಿದ್ದರೆ ವಿಪಕ್ಷ : ದೇವೇಗೌಡ

ಸಾರಾಂಶ

ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು ಒಂದು ವೇಳೆ ನಮ್ಮ ನಿರೀಕ್ಷೆಯಂತೆ ಸ್ಥಾನಗಳು ಬರದೆ ಹೋದರೆ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸುತ್ತೇವೆ ಎಂದರು. ಆಡಳಿತ ನಡೆಸುವ ಪರಿಸ್ಥಿತಿ ಬಿಜೆಪಿ ಅಥವಾ ಕಾಂಗ್ರೆಸ್’ಗೆ ಬಂದರೆ ನಾವು ಈ ಎರಡು ಪಕ್ಷಗಳಿಂದ ಹೊರಗೆ ಉಳಿಯುತ್ತೇವೆ. ಇವರ ಸಹವಾಸ ನಮಗೆ ಮತ್ತೆ ಬೇಡ ಎನ್ನುವ ಮೂಲಕ ಯಾವುದೇ ಪಕ್ಷದೊಂದಿಗೆ ಮೈತ್ರಿಯ ಸಾಧ್ಯತೆಯನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ  ತಳ್ಳಿಹಾಕಿದರು

ಚಿಕ್ಕಮಗಳೂರು(ಡಿ.9): ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಕಿಂಗ್ ಯಾರು, ಕಿಂಗ್ ಮೇಕರ್ ಯಾರೆಂದು ಜನ ತೀರ್ಮಾನಿಸಲಿದ್ದು, ಇದಕ್ಕೆ ಇನ್ನೂ ಕಾಲಾವಕಾಶ ಇದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು ಒಂದು ವೇಳೆ ನಮ್ಮ ನಿರೀಕ್ಷೆಯಂತೆ ಸ್ಥಾನಗಳು ಬರದೆ ಹೋದರೆ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸುತ್ತೇವೆ ಎಂದರು. ಆಡಳಿತ ನಡೆಸುವ ಪರಿಸ್ಥಿತಿ ಬಿಜೆಪಿ ಅಥವಾ ಕಾಂಗ್ರೆಸ್’ಗೆ ಬಂದರೆ ನಾವು ಈ ಎರಡು ಪಕ್ಷಗಳಿಂದ ಹೊರಗೆ ಉಳಿಯುತ್ತೇವೆ. ಇವರ ಸಹವಾಸ ನಮಗೆ ಮತ್ತೆ ಬೇಡ ಎನ್ನುವ ಮೂಲಕ ಯಾವುದೇ ಪಕ್ಷದೊಂದಿಗೆ ಮೈತ್ರಿಯ ಸಾಧ್ಯತೆಯನ್ನು ತಳ್ಳಿಹಾಕಿದರು. 10 ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದಿಂದ ಸ್ಪರ್ಧೆ ಮಾಡಲು ಕೆಲವು ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ನಡುವೆ ಪೈಪೋಟಿ ನಡೆಯುತ್ತಿದೆ. ಸೂಕ್ತ ಅಭ್ಯರ್ಥಿ ಆಯ್ಕೆ ನಮ್ಮ ಗುರಿಯಾಗಿರುವುದರಿಂದ ಪಟ್ಟಿ ಅಂತಿಮಗೊಳಿಸಲು ತಡವಾಗುತ್ತಿದೆ ಎಂದು ತಿಳಿಸಿದರು.

ಉತ್ತರ ಕರ್ನಾಟಟಕದಲ್ಲಿ ನಮ್ಮ ಪಕ್ಷ ಸದೃಢವಾಗಿದೆ. ಪಕ್ಷದಲ್ಲಿ ಒಳ್ಳೆಯ ನಾಯಕರು ಇದ್ದಾರೆ. ರೈತರು, ಅಲ್ಪಸಂಖ್ಯಾತರು, ಬಡವರು ಹೀಗೆ ಎಲ್ಲಾ ವರ್ಗದವರು ನಮ್ಮ ಪರವಾಗಿದ್ದಾರೆ, ನಮ್ಮ ಗೆಲುವು ಖಚಿತ ಎಂದರು. ನನ್ನ ಬಗ್ಗೆ ನಮ್ಮ ಪಕ್ಷದ ಬಗ್ಗೆ ಹಗುರವಾಗಿ, ಲೇವಡಿಯಾಗಿ ಮಾತನಾಡುತ್ತಾರೆ. ಇದಕ್ಕೆ ನಾವೇನೂ ಬೇಸರಪಡುವುದಿಲ್ಲ. ಚಿಕ್ಕಮಗಳೂರಿಗೆ ರೈಲ್ವೆ ಸಂಪರ್ಕ ಕಲ್ಪಿಸಬೇಕೆಂದು ಇಂದಿರಾಗಾಂಧಿ ಹೇಳಿದ್ದರು. ಈ ಕೆಲಸ ಮಾಡಿ ಮುಗಿಸಲು ನಾನು ಬರಬೇಕಾಯಿತು ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್‌ ದೆವ್ವದ ಮನೆ, ದಿನಕ್ಕೊಂದು ಬಿಳಿ-ಕರಿ ದೆವ್ವ ಹೊರ ಬರ್ತಿವೆ: ಆರ್.ಅಶೋಕ್ ವ್ಯಂಗ್ಯ
ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ ನಿಯಮ ಶೀಘ್ರ ಜಾರಿ: ಸಚಿವ ಶಿವರಾಜ ತಂಗಡಗಿ