ಅಂತ್ಯವಾಯ್ತು ಉಪ ಸಮರ: ಕುತೂಹಲ ಕೆರಳಿಸಿದ ಏ.13ರ ಫಲಿತಾಂಶ

Published : Apr 10, 2017, 04:00 AM ISTUpdated : Apr 11, 2018, 12:51 PM IST
ಅಂತ್ಯವಾಯ್ತು ಉಪ ಸಮರ: ಕುತೂಹಲ ಕೆರಳಿಸಿದ ಏ.13ರ ಫಲಿತಾಂಶ

ಸಾರಾಂಶ

ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪ ಸಮರ ಮುಕ್ತಾಯವಾಗಿದೆ.ಕಾಂಗ್ರೆಸ್​ ಮತ್ತು ಬಿಜೆಪಿ ಎರಡೂ ಪಕ್ಷಗಳಿಗೂ ಈ ಚುನಾವಣೆಯ ಫಲಿತಾಂಶ ಪ್ರಮುಖವಾಗಿದೆ. ಏಪ್ರಿಲ್​ 13 ರಂದು ಹೊರಬೀಳುವ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.  

ಮೈಸೂರು(ಎ.10): ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪ ಸಮರ ಮುಕ್ತಾಯವಾಗಿದೆ.ಕಾಂಗ್ರೆಸ್​ ಮತ್ತು ಬಿಜೆಪಿ ಎರಡೂ ಪಕ್ಷಗಳಿಗೂ ಈ ಚುನಾವಣೆಯ ಫಲಿತಾಂಶ ಪ್ರಮುಖವಾಗಿದೆ. ಏಪ್ರಿಲ್​ 13 ರಂದು ಹೊರಬೀಳುವ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.  

ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಗುಂಡ್ಲುಪೇಟೆ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರಗಳಲ್ಲಿನ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದೆ. ನಂಜನಗೂಡಿನಲ್ಲಿ  ನಿನ್ನ ಸಂಜೆ 5ರ ವೇಳೆಗೆ ಶೇ 76.84ರಷ್ಟು ಮತ ಚಲಾವಣೆಯಾಗಿದ್ದರೆ, ಗುಂಡ್ಲುಪೇಟೆಯಲ್ಲಿ ಶೇ 78 ಮತ ಚಲಾವಣೆಯಾಗಿದೆ. ಬಿಸಿಲಿನ ಬೇಗೆಯಿಂದಾಗಿ ಮತದಾನ ಪ್ರಕ್ರಿಯೆ ಮಧ್ಯಾಹ್ನ  ಮಂದಗತಿಯಲ್ಲಿ ಸಾಗಿತ್ತು. ಆದರೆ ಸಂಜೆ ವೇಳೆಗೆ ಮತ್ತೆ ಜನ ಸಾಲುಗಟ್ಟಿ ಮತಗಟ್ಟೆಗಳಲ್ಲಿ ನಿಂತು ಮತದಾನ ಮಾಡಿದರು.

ಸಾಮಾನ್ಯ ಚುನಾವಣೆಗಳಲ್ಲಿ ನಡೆಯುವಂತೆಯೇ ಪ್ರಸ್ತುತ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ  ಕೆಲ ಅಹಿತಕರ ಘಟನೆಗಳು ನಡೆದವು. ಎರಡೂ ಕ್ಷೇತ್ರಗಳಲ್ಲಿ ಕೆಲವೆಡೆ ಕಾರ್ಯಕರ್ತರ ನಡುವೆ ಜಟಾಪಟಿ, ಗುಂಪು ಚದುರಿಸಲು ನಡೆದ ಲಘು ಲಾಠಿ ಪ್ರಹಾರ ಹೊರತುಪಡಿಸಿ ಮತದಾನ ಬಹುತೇಕ ಶಾಂತಿಯುತವಾಗಿತ್ತು.

ಮಾಜಿ ಸಚಿವ ಎಚ್‌.ಎಸ್‌. ಮಹದೇವಪ್ರಸಾದ್‌ ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ  ಸ್ಥಾನಕ್ಕೆ ಗುಂಡ್ಲುಪೇಟೆಯಲ್ಲಿ ಮತದಾನ ನಡೆದರೆ, ಮಾಜಿ ಸಚಿವ ಶ್ರೀನಿವಾಸ ಪ್ರಸಾದ್‌ ಅವರು ಕಾಂಗ್ರೆಸ್‌ ಪಕ್ಷಕ್ಕೆ  ರಾಜೀನಾಮೆ ನೀಡಿ, ಬಿಜೆಪಿ ಸೇರಿದ್ದರಿಂದ ನಂಜನಗೂಡಿನಲ್ಲಿ ಚುನಾವಣೆ ನಡೆಯಿತು.

ಏ.13ರಂದು ಮತಗಳ ಎಣಿಕೆ ನಡೆಯಲಿದ್ದು, ಅಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಈ ಫಲಿತಾಂಶದ ಮೇಲೆ ರಾಜ್ಯ ಸಚಿವ ಸಂಪುಟದಲ್ಲಿ  ಬದಲಾವಣೆಯಾಗುವ ಸಾಧ್ಯತೆಯಿದ್ದರೆ , ಬಿಜೆಪಿ ಪಾಳಯದಲ್ಲೂ ಸಾಕಷ್ಟು  ಬದಲಾವನೆಯಾಗುವ ಸಾಧ್ಯತೆಯಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐದು ವರ್ಷ ಬಳಿಕ ಖುಲಾಯಿಸಿದ ಅದೃಷ್ಠ, 24 ಲಕ್ಷ ರೂ ದುಬೈ ಲಾಟರಿ ಗೆದ್ದ ಭಾರತ ಮೂಲದ ನರ್ಸ್‌
ಕೆಎಚ್‌ಬಿ ಬಡಾವಣೆ ನಿರ್ಮಾಣದಲ್ಲಿ ಭಾರೀ ಭ್ರಷ್ಟಾಚಾರ, ದಾಖಲೆಗಳಲ್ಲಿ ಒಂದು, ವಾಸ್ತವದಲ್ಲಿ ಇನ್ನೊಂದು!