ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ರಾಜ್ಯದ ಜನರಿಗೆ ವಿದ್ಯುತ್ ಶಾಕ್..?

By Web DeskFirst Published May 16, 2019, 8:09 PM IST
Highlights

ಲೋಕಸಭಾ ಎಲೆಕ್ಷನ್ ಹಿನ್ನೆಲೆಯಲ್ಲಿ ವಿದ್ಯುತ್ ಏರಿಕೆ ಬ್ರೇಕ್ ಹಾಕಿದ್ದ ರಾಜ್ಯ ಸರ್ಕಾರ, ಇದೀಗ ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ರಾಜ್ಯದ ಜನರಿಗೆ  ವಿದ್ಯುತ್ ದರ ಏರಿಕೆ ಶಾಕ್ ನೀಡಲು ಮುಂದಾಗಿದೆ.

ಬೆಂಗಳೂರು, [ಮೇ.16]: ರಾಜ್ಯದ ಜನರಿಗೆ ಕೆಇಆರ್​ಸಿ (ಕರ್ನಾಟಕ ಎಲೆಕ್ಟ್ರಾನಿಕ್ ರೆಗ್ಯುಲೇಟರಿ ಕಮಿಷನ್‌) ಶಾಕ್ ನೀಡಲಿದೆ. ಜೂನ್ 1ರಿಂದ ವಿದ್ಯುತ್ ದರ ಪ್ರತಿ ಯೂನಿಟ್​ಗೆ 45-50 ಪೈಸೆ ಹೆಚ್ಚಳ ಮಾಡುವ ಸಾಧ್ಯತೆ ಇದೆ.

ರಾಜ್ಯ ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ದರ ಹೆಚ್ಚಿಸುವಂತೆ ಕೆಇಆರ್​ಸಿ ಗೆ ಪ್ರಸ್ತಾವನೆ ಸಲ್ಲಿಸಿದ್ದವು. ಅಲ್ಲದೇ, ಪ್ರತೀ ವರ್ಷ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಳ ಆಗುತ್ತಿತ್ತು. ಆದ್ರೆ ಈ ಬಾರಿ ಲೋಕಸಭೆ ಚುನಾವಣೆ ಎದುರಾಗಿದ್ದರಿಂದ ವಿದ್ಯುತ್ ದರ ಹೆಚ್ಚಳ ಆಗಿರಲಿಲ್ಲ. 

ಇದೀಗ ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ವಿದ್ಯುತ್ ನಿಗಮ ಮಂಡಳಿ ದರ ಏರಿಕೆ ಬಗ್ಗೆ ಸಿಎಂಗೆ ಪ್ರಸ್ತಾವನೆ ಸಲ್ಲಿಸಿದೆ.  ಕಳೆದ ವರ್ಷ ಎರಡು ಬಾರಿ ವಿದ್ಯುತ್ ದರ ಪರಿಷ್ಕರಣೆ ಮಾಡಲಾಗಿತ್ತು. ಮೊದಲಿಗೆ ಮೇ ತಿಂಗಳಿನಲ್ಲಿ ಯೂನಿಟ್ ಒಂದಕ್ಕೆ 38 ಪೈಸೆ ಹೆಚ್ಚಳ ಮಾಡಿದ್ದರೆ, ಅಕ್ಟೋಬರ್ ವೇಳೆಗೆ 14 ಪೈಸೆ ಹೆಚ್ಚಳ ಮಾಡಲಾಗಿತ್ತು. 

ವಿದ್ಯುತ್ ದರ ಏರಿಕೆಯಾದ್ರೂ ಸಹ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತಲೆದೂರುವ ಸಾಧ್ಯತೆಗಳಿವೆ. ಯಾಕಂದ್ರೆ ಸರಿಯಾದ ಸಮಯಕ್ಕೆ ಮಳೆ ಇಲ್ಲದ ಕಾರಣ ಕರ್ನಾಟಕದಲ್ಲಿ ಜಲಾಶಯಗಳು ನಿಧಾನಕ್ಕೆ ಬರಿದಾಗುತ್ತಿವೆ. 

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.

click me!