
ಶಿರಸಿ(ಮಾ.04): ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಆನೆಗೆ ಸರಿಯಾದ ಚಿಕಿತ್ಸೆ ಸಿಗದೆ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಿಸಲಕೊಪ್ಪ ಗ್ರಾಮದ ಉಳ್ಳಾಲದ ಗ್ರಾಮದಲ್ಲಿ ನಡೆದಿದೆ.
ಆನೆಯು ಕಳೆದ ಮೂರು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಗುಂಪಿನಿಂದ ತಪ್ಪಿಸಿಕೊಂಡು ಗ್ರಾಮದ ಕಡೆ ಬಂದಿತ್ತು. ಆನೆಯ ಅನಾರೋಗ್ಯದ ಬಗ್ಗೆ ಸ್ಥಳೀಯರು ಅರಣ್ಯಾಧಿಕಾರಿಗಳ ಗಮಕ್ಕೆ ತಂದಿದ್ದರು. ಆದರೆ ಅರಣ್ಯಾಧಿಕಾರಿಗಳ ದಿವ್ಯ ನಿರ್ಲಕ್ಯದಿಂದಾಗಿ ಆನೆ ಪ್ರಾಣಬಿಟ್ಟಿದೆ. ಆನೆ ಸಾವಿನಿಂದಾಗಿ ಉಲ್ಲಾಳ ಗ್ರಾಮಸ್ಥರಲ್ಲಿ ದುಖಃ ಮನೆ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.