
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಬಂದಿಳಿದ ಯುವಕನೊಬ್ಬನನ್ನು ಐಸಿಸ್ ನಂಟು ಹೊಂದಿದ್ದಾನೆ ಎಂಬ ಶಂಕೆಯ ಮೇರೆಗೆ ಗುಪ್ತಚರ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದಾರೆ.
ತಮಿಳುನಾಡಿನ ತಿರುಚ್ಚಿ ಮೂಲದ ಎಂಜಿನಿಯರ್ ದುಬೈನಿಂದ ಜೆಟ್ ಏರ್‌ವೇಸ್ ವಿಮಾನದ ಮೂಲಕ ಬೆಂಗಳೂರು ವಿಮಾನದ ನಿಲ್ದಾಣದಲ್ಲಿ ಇಳಿದಿದ್ದ. ಶಂಕಿತನ ಪಾಸ್‌ಪೋರ್ಟ್‌ನಲ್ಲಿ ಹಿಂದು ಹೆಸರಿದ್ದು, ಆತನ ಉಡುಗೆ-ತೊಡಗೆ ಮುಸ್ಲಿಂ ವ್ಯಕ್ತಿಗಳ ರೀತಿ ಇತ್ತು. ಹೀಗಾಗಿ ಅನುಮಾನಗೊಂಡು ಗುಪ್ತಚರ ಸಿಬ್ಬಂದಿ ಆತನ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು.
ಹಿಂದು ಧರ್ಮದ ಬ್ರಾಹ್ಮಣ ಸಮುದಾಯದ ವ್ಯಕ್ತಿ ಕಳೆದ ಆರು ತಿಂಗಳ ಹಿಂದೆ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದ. ಇದರಿಂದ ಆತನ ಉಡುಗೆ-ತೊಡುಗೆ ಮುಸ್ಲಿಂರಂತೆ ಇತ್ತು. ವಿಚಾರಣೆಗೆ ಒಳಪಡಿಸಿದ ಬಳಿಕ ಸತ್ಯಾಂಶ ತಿಳಿದ ಮೇಲೆ ಬಿಡುಗಡೆಗೊಳಿಸಲಾಯಿತು ಎಂದು ವಿಮಾನನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.