ಸಿದ್ದರಾಮಯ್ಯ ಸರ್ಕಾರ ಬಿಜೆಪಿ, ಹಿಂದೂ ಕಾರ್ಯಕರ್ತರ ಕೊಲೆ ಮಾಡಿಸುತ್ತಿದೆ: ಈಶ್ವರಪ್ಪ

Published : Dec 12, 2017, 01:44 PM ISTUpdated : Apr 11, 2018, 12:48 PM IST
ಸಿದ್ದರಾಮಯ್ಯ ಸರ್ಕಾರ ಬಿಜೆಪಿ, ಹಿಂದೂ ಕಾರ್ಯಕರ್ತರ ಕೊಲೆ ಮಾಡಿಸುತ್ತಿದೆ: ಈಶ್ವರಪ್ಪ

ಸಾರಾಂಶ

ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲಿ ಬಿಜೆಪಿ, ಹಿಂದೂ ಕಾರ್ಯಕರ್ತರ ಕೊಲೆ ಮಾಡಿಸುವ ಪ್ರಯತ್ನವನ್ನು ಸಿದ್ದರಾಮಯ್ಯ ಸರ್ಕಾರ ಮಾಡಿಸುತ್ತಿದೆ. ವಿಡಿಯೋ , ಪೋಟೋಗಳನ್ನು ರಾಜ್ಯಪಾಲರಿಗೆ ಕೊಟ್ಟಿದ್ದೇವೆ. ಮುಸಲ್ಮಾನ ಗೂಂಡಾಗಳು ಪೊಲೀಸರ ಜೊತೆಗೇ ಇದ್ದ ಪೋಟೋ , ವಿಡಿಯೋಗಳನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದು ರಾಜಭವನ ಚಲೋ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ ಹೇಳಿದ್ದಾರೆ.

ಬೆಂಗಳೂರು (ಡಿ.12): ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲಿ ಬಿಜೆಪಿ, ಹಿಂದೂ ಕಾರ್ಯಕರ್ತರ ಕೊಲೆ ಮಾಡಿಸುವ ಪ್ರಯತ್ನವನ್ನು ಸಿದ್ದರಾಮಯ್ಯ ಸರ್ಕಾರ ಮಾಡಿಸುತ್ತಿದೆ. ವಿಡಿಯೋ , ಪೋಟೋಗಳನ್ನು ರಾಜ್ಯಪಾಲರಿಗೆ ಕೊಟ್ಟಿದ್ದೇವೆ. ಮುಸಲ್ಮಾನ ಗೂಂಡಾಗಳು ಪೊಲೀಸರ ಜೊತೆಗೇ ಇದ್ದ ಪೋಟೋ , ವಿಡಿಯೋಗಳನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದು ರಾಜಭವನ ಚಲೋ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ ಹೇಳಿದ್ದಾರೆ.

ಪರೇಶ್ ಮೆಸ್ತಾ ಕೊಲೆಯಾಗುತ್ತಿರುವ ಇಪ್ಪತ್ತನೇ ಹಿಂದೂ ಯುವಕ.  ಮರಣೋತ್ತರ ಪರೀಕ್ಷಾ ವರದಿ ಸೇರಿದಂತೆ ಪೊಲೀಸರನ್ನು ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ.  ಪರೇಶ್ ಮೆಸ್ತಾ ಪಾಲಕರೂ ಕೂಡಾ ನನ್ನ ಮಗನನ್ನು ಹೊಡೆದು ಹೊಡೆದೂ ಸಾಯಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.  ಆದ್ದರಿಂದ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು.  ರಾಜ್ಯಪಾಲರು ಈ ವಿಚಾರವನ್ನು  ಕೇಂದ್ರ ಸರ್ಕಾರದ ಗಮನಕ್ಕೆ ತಂದು ತನಿಖೆ ನಡೆಸುವಂತೆ ಹೇಳಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ