
ಬೆಂಗಳೂರು (ಮಾ.08): ಪ್ರತಿಪಕ್ಷ ನಾಯಕ ಈಶ್ವರಪ್ಪ ಸಿಎಂ ಮೇಲೆ ಸದಾ ವಾಗ್ದಾಳಿ ನಡೆಸುವುದು ಹೊಸದೇನೆಲ್ಲ. ಆದರೆ ಇಂದು ಸ್ವಲ್ಪ ಭಿನ್ನವಾಗಿ ಹೇಳಿಕೆ ನೀಡಿ ವಿವಾದ ಮಾಡಿಕೊಂಡಿದ್ದಾರೆ.
ಸಿ ಎಂ ಸಿದ್ದರಾಮಯ್ಯ ಇಂದು ಸಂಜೆಯೊಳಗೆ ಕೊಲೆಯಾಗಬಹುದು. ಸಿಎಂ ಸಿದ್ದರಾಮಯ್ಯ ಕೂಡಲೇ ಕೇಂದ್ರ ಸರ್ಕಾರದ ಭದ್ರತೆ ಪಡೆಯಬೇಕು. ಪ್ರಧಾನಮಂತ್ರಿ ಹಾಗೂ ಕೇಂದ್ರ ಗೃಹ ಸಚಿವಾಲಯದಿಂದ ನೆರವು ಪಡೆಯಬೇಕು. ಸಿಎಂ, ಗೃಹ ಸಚಿವರಿಗೂ ರಕ್ಷಣೆ ಅಗತ್ಯವಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.
ನಿನ್ನೆ ಲೋಕಾಯುಕ್ತ ವಿಶ್ವನಾಥ ಶೆಟ್ಟಿಯವರಿಗೆ ಚೂರಿ ಇರಿದು ಹತ್ಯೆಗೆ ಯತ್ನಿಸಿರುವ ಘಟನೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇಲ್ಲಿ ಯಾರಿಗೂ ಭದ್ರತೆ ಇಲ್ಲ ಎಂದು ಹೇಳುವಾಗ ಈ ರೀತಿ ಹೇಳಿಕೆಯನ್ನು ಕೊಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.