ಸಂತೋಷ್ ವಿಚಾರ: ಕಾರ್ಯಕಾರಿಣಿಗೆ ಈಶ್ವರಪ್ಪ ಗೈರು?

Published : May 04, 2017, 10:25 AM ISTUpdated : Apr 11, 2018, 12:53 PM IST
ಸಂತೋಷ್ ವಿಚಾರ: ಕಾರ್ಯಕಾರಿಣಿಗೆ ಈಶ್ವರಪ್ಪ ಗೈರು?

ಸಾರಾಂಶ

ಸಂಘದ ಪ್ರಚಾರಕರಾಗಿರುವ ಅವರ ಹೆಸರನ್ನು ಪ್ರಸ್ತಾಪಿಸಿ ಯಡಿಯೂರಪ್ಪ ಅವರು ಆಪಾದನೆ ಮಾಡಿದ್ದು ತಪ್ಪು. ಜತೆಗೆ ಸಂಘ ಮೂಲದ ಭಾನು​ಪ್ರಕಾಶ್‌ ಮತ್ತು ನಿರ್ಮಲಕುಮಾರ್‌ ಸುರಾನಾ ಅವರನ್ನು ಪಕ್ಷದ ಉಪಾಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿದ್ದು ಸರಿಯಲ್ಲ ಎನ್ನುತ್ತಿರುವ ಈಶ್ವರಪ್ಪ ಅವರು ಈ ಮೂಲಕ ಸಂಘ ಪರಿವಾರದ ಮುಖಂಡರು ಹಾಗೂ ಕಾರ್ಯಕರ್ತರ ಒಲವು ಗಳಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ.

ಬೆಂಗಳೂರು (ಮೇ.04): ಪಕ್ಷದ ರಾಷ್ಟ್ರೀಯ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್‌ ವಿರುದ್ಧ ಯಡಿ​ಯೂ​ರಪ್ಪ ಅವರು ಮಾತನಾಡಿರುವುದನ್ನೇ ಮುಂದಿಟ್ಟು​ಕೊಂಡು ಈಶ್ವರಪ್ಪ ಮೈಸೂರಿನ ಕಾರ್ಯ​ಕಾರಿ​ಣಿ ಸಭೆಗೆ ಗೈರುಹಾಜರಾಗುವ ಸಾಧ್ಯತೆಯಿದೆ.

ಸಂಘದ ಪ್ರಚಾರಕರಾಗಿರುವ ಅವರ ಹೆಸರನ್ನು ಪ್ರಸ್ತಾಪಿಸಿ ಯಡಿಯೂರಪ್ಪ ಅವರು ಆಪಾದನೆ ಮಾಡಿದ್ದು ತಪ್ಪು. ಜತೆಗೆ ಸಂಘ ಮೂಲದ ಭಾನು​ಪ್ರಕಾಶ್‌ ಮತ್ತು ನಿರ್ಮಲಕುಮಾರ್‌ ಸುರಾನಾ ಅವರನ್ನು ಪಕ್ಷದ ಉಪಾಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿದ್ದು ಸರಿಯಲ್ಲ ಎನ್ನುತ್ತಿರುವ ಈಶ್ವರಪ್ಪ ಅವರು ಈ ಮೂಲಕ ಸಂಘ ಪರಿವಾರದ ಮುಖಂಡರು ಹಾಗೂ ಕಾರ್ಯಕರ್ತರ ಒಲವು ಗಳಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ.

ಹೀಗಾಗಿ, ಈ ತಿಂಗಳ 6 ಮತ್ತು 7ರಂದು ಮೈಸೂರಿನಲ್ಲಿ ನಡೆಯುವ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳುವ ಬದಲು ಗೈರಾಗುವುದೇ ಸೂಕ್ತ ಎಂಬ ಚಿಂತನೆಯಲ್ಲಿರುವ ಈಶ್ವರಪ್ಪ, ಇನ್ನೆರಡು ದಿನಗಳಲ್ಲಿ ತಮ್ಮ ಆಪ್ತರೊಂದಿಗೆ ಮಾತುಕತೆ ನಡೆಸಿ ಸ್ಪಷ್ಟತೀರ್ಮಾನ ಕೈಗೊಳ್ಳಲಿದ್ದಾರೆ.

‘ರಾಜಕುಮಾರ' ಸಿನಿಮಾ ನೋಡಿದ ಈಶ್ವರಪ್ಪ!

ಬೆಂಗಳೂರು: ತಮ್ಮ ಮಾತುಗಳಿಂದ ಬಿಜೆಪಿ ಭಿನ್ನಮತದ ಕಾವು ಏರಿಸುತ್ತಿರುವ ಕೆ.ಎಸ್‌.ಈಶ್ವರಪ್ಪ ಅವರು ಬುಧವಾರ ಕನ್ನಡ ಚಲನಚಿತ್ರ ‘ರಾಜಕುಮಾರ' ವೀಕ್ಷಿಸಿದರು. ಸಂಜೆ ಶಿವಮೊಗ್ಗದಿಂದ ಭದ್ರಾವತಿಗೆ ತೆರಳಿ ತಮ್ಮ ಕುಟುಂಬದ ಸದಸ್ಯರೊಂದಿಗೆ ಥೇಟರ್‌ಗೆ ತೆರಳಿ ಆನಂದಿಸಿದರು. ಈ ಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಮೈಸೂರಿನಲ್ಲಿ ನೋಡಿದ್ದರು. ಮೂರು ದಿನಗಳ ಹಿಂದೆ ಸಿದ್ದು ಒಂದೇ ದಿನದಲ್ಲಿ ‘ಬಾಹುಬಲಿ-2' ಮತ್ತು ಕನ್ನಡ ಚಿತ್ರ ‘ನಿರುತ್ತರ' ವೀಕ್ಷಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ